ಉಜಿರೆ ನ್ಯಾಚುರೋಪತಿ ಕಾಲೇಜು ವಾರ್ಷಿಕ ಕ್ರೀಡಾಕೂಟ.

Advt_NewsUnder_1
Advt_NewsUnder_1

ಉಜಿರೆ: ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ವಾರ್ಷಿಕ ಕ್ರೀಡಾಕೂಟ ಮೇ.22 ರಂದು ನಡೆಯಿತು.
ಶಾಸಕ ಹರೀಶ್ ಪೂಂಜ ಉದ್ಘಾಟನೆ ನೆರೆವೇರಿಸಿದರು. ಈ ಸಂಸ್ಥೆ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ದೇಶದ ವಿವಿದ ರಾಜ್ಯಗಳಿಂದಲೂ ವಿದ್ಯಾರ್ಥಿಗಳು ಇಲ್ಲಿಗೆ ಬಂದು ಪ್ರಕೃತಿ ಚಿಕಿತ್ಸೆ ಬಗ್ಗೆ ಅಧ್ಯಯನ ನಡೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅಭಿಪ್ರಾಯಪಟ್ಟರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಶಶಿಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಎಸ್ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇಂದ್ರ ಕುಮಾರ್ ಬೆಳಾಲು ವಂದಿಸಿದರು. ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಸ್ವಾಗತಿಸಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.