HomePage_Banner_
HomePage_Banner_

ಬಂಗೇರರಿಗೆ ವಿಧಾನ ಪರಿಷತ್ ಸದಸ್ಯತ್ವದ ಸ್ಥಾನಮಾನ ನೀಡುವಂತೆ ಆಗ್ರಹ.

ಬೆಳ್ತಂಗಡಿ : ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಧೃಡವಾಗಿ ಮತ್ತೆ ಕಟ್ಟಿಬೆಳೆಸಲು ಜಿಲ್ಲೆಯ ಎಲ್ಲಾ ಧರ್ಮಿಯರ ಪ್ರೀತಿ ಪಾತ್ರರಾದ ಕೆ. ವಸಂತ ಬಂಗೇರರಿಗೆ ವಿಧಾನ ಪರಿಷತ್ ಸದಸ್ಯತ್ವದ ಸ್ಥಾನಮಾನವನ್ನು ನೀಡುವಂತೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎನ್. ಶ್ರೀನಿವಾಸ ವಿ. ಕಿಣಿ ಮಾಜಿ ಮುಖ್ಯ ಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾದ ಸಿದ್ದರಾಮಯ್ಯರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದ ಬಿ. ರಮಾನಾಥ ರೈಯವರ ನೇತೃತ್ವದಲ್ಲಿ 2013 ರ ರಾಜ್ಯ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 8 ಸ್ಥಾನಗಳ ಪೈಕಿ 7 ನ್ನು ಪಡೆದುಕೊಂಡು ಜಯವನ್ನು ಸಾಧಿಸಿತ್ತು. ಇದೀಗ 2018 ರ ವಿಧಾನ ಸಭಾ ಚುನಾವಣೆಯಲ್ಲಿ 8 ಸ್ಥಾನಗಳ ಪೈಕಿ ಒಂದರಲ್ಲಿ ಮಾತ್ರ ಜಯಗಳಿಸಿದೆ. ಪ್ರಸ್ತುತ ಎಲ್ಲಾ ಧರ್ಮದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹತ್ತಿರದಲ್ಲೇ ಬರಲಿರುವ ಸ್ಥಳೀಯಾಡಳಿತ, ಪಧವಿದರ /ಶಿಕ್ಷಕರ ಕ್ಷೇತ್ರದ ಚುನಾವಣೆ ಹಾಗೂ 2019 ರ ಲೋಕಸಭಾ ಚುನಾವಣೆ ಯಲ್ಲಿ ಪಕ್ಷವು ಜಯಗಳಿ ಸುವುದು ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯವನ್ನು ಒಟ್ಟಿಗೆ ಕೊಂಡೊಯ್ಯಬಲ್ಲ ಪ್ರಭಾವಿ ನಾಯಕರ ಅಗತ್ಯವಿದೆ. ಬೆಳ್ತಂಗಡಿಯ ಮಾಜಿ ಶಾಸಕರು ಹಾಗೂ ಜಿಲ್ಲೆಯ ಹಿರಿಯ ರಾಜಕಾರಣಿಯೂ ಆಗಿರುವ ಕೆ. ವಸಂತ ಬಂಗೇರ ಈ ನಿಟ್ಟಿನಲ್ಲಿ ಸಮರ್ಥ ನಾಯಕರಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬಂಗೇರರು ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಿಯರನ್ನು ತನ್ನ ರಾಜಕೀಯ ಜೀವನದಲ್ಲಿ ಎಂದೂ ಬಿಟ್ಟುಕೊಡದೆ ಸದಾ ಅವರ ಬೆಂಬಲಕ್ಕೆ ನಿಂತವರು. ತನ್ನ ರಾಜಕೀಯ ಜೀವನದುದ್ದಕ್ಕೂ ಹಿಂದೂ ಧರ್ಮಿಯರಲ್ಲಿ ಸದಾ ಪ್ರೀತಿ, ವಿಶ್ವಾಸವನ್ನು ಇಟ್ಟವರು. 1983 ರಿಂದ ಶಾಸಕರಾದ ಬಳಿಕ ಕೋಮು ಗಲಭೆಗೆ ಅವಕಾಶ ನೀಡದೆ ಎರಡು ಕೋಮುಗಳ ನಡುವೆ ವಿಶ್ವಾಸದಿಂದ ಇರುವಂತೆ ನೋಡಿಕೊಂಡಿದ್ದಾರೆ. ಐದು ಬಾರಿ ಶಾಸಕರಾಗಿ, ಭ್ರಷ್ಟಾಚಾರ ರಹಿತವಾಗಿ ಆಡಳಿತ ನಡೆಸಿದ್ದಾರೆ. ರಾಜ್ಯ ಸರಕಾರದ ಮುಖ್ಯ ಸಚೇತಕರಾಗಿ, ರಾಜ್ಯ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮುಖ್ಯ ಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಎಸ್.ಆರ್ ಬೊಮ್ಮಾಯಿ, ಹೆಚ್.ಡಿ ದೇವೇ ಗೌಡ, ಜೆ.ಹೆಚ್ ಪಟೇಲ್, ಸಿದ್ದರಾಮಯ್ಯ ಮೊದಲಾದವರ ನಾಯಕತ್ವದಲ್ಲಿ ಶಾಸಕರಾಗಿ ವಿವಿಧ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.
ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಬಂಗೇರರನ್ನು ವಿಧಾನ ಪರಿಷತ್ ಸದಸ್ಯತ್ವ ನೀಡಿ ರಾಜ್ಯ ಸರಕಾರದಲ್ಲಿ ದ.ಕ ಜಿಲ್ಲಾ ಉಸ್ತುವಾರಿಯೊಂದಿಗೆ ಸಚಿವರನ್ನಾಗಿ ನೇಮಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಳೆಸಲು ಸಹಕರಿಸುವಂತೆ ಪತ್ರದಲ್ಲಿ ವಿನಂತಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.