ಮಲೆಕುಡಿಯ ಯುವ ವೇದಿಕೆ ಆಶ್ರಯದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ.

ಬೆಳ್ತಂಗಡಿ: ಮಲೆಕುಡಿಯರ ಯುವವೇದಿಕೆ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಉತ್ತಮ ಅಂಕ ಪಡೆದ ವಿಧ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮವು ಮೇ.27  ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಮಲೆಕುಡಿಯರ ಯುವವೇದಿಕೆಯ ಅಧ್ಯಕ್ಷೆ ಶ್ರೀಮತಿ ವಸಂತಿ ಬೈರಕಟ್ಟ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಪ್ರೊತ್ಸಾಹಧನ ವಿತರಿಸಿ ಮಾತನಾಡಿದ ರೈಲ್ವೇ ಚೀಫ್ ಕಂಟ್ರೋಲರ್ ರಮಾನಂದ್ ರವರು ಸರಕಾರ ಮತ್ತು ಸಂಘ ಸಂಸ್ಥೆಗಳು ವಿಧ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿವಿಧ ರೀತಿಯಲ್ಲಿ ನೆರವು ಮತ್ತು ಪ್ರೋತ್ಸಾಹವನ್ನು ನೀಡುತ್ತಿದ್ದು, ಎಲ್ಲಾ ಸೌಲಭ್ಯಗಳ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸ್ಥಾನ ಗಳಿಸಬೇಕೆಂದು ಹೇಳಿದರು.
ಅಟ್ಲಾಜೆ ಶಾಲೆಯ ಶಿಕ್ಷಕಿ ಶ್ರೀಮತಿ ಅನುಸೂಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪರಮೇಶ್ವರ ಮಲೆಕುಡಿಯ ಪ್ರಾರ್ಥಿಸಿ, ಆನಂದ್ ಕಲ್ಗೋಡು ಸ್ವಾಗತಿಸಿ, ಕಾರ್ಯದರ್ಶಿ ಪುರುಷೋತ್ತಮ್ ಗುಂಡ್ಯ ವರದಿ ಮಂಡಿಸಿ, ವಕೀಲ ವೆಂಕಟೇಶ್ ಕೆ.ಎಸ್ ಪ್ರಸ್ತಾವಿಕವಾಗಿ ಮಾತನಾಡಿ, ಉಮೇಶ್ ನಾರಾವಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.