ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಗಳ ಪರ ಮತದಾರರ ಒಲವು: ನಳಿನ್

ಬೆಳ್ತಂಗಡಿ : ಜೂ.8 ರಂದು ನಡೆಯಲಿರುವ ವಿಧಾನ ಪರಿಷತ್ ನ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಮತ್ತು ಪದವಿಧರ ಕ್ಷೇತ್ರದಲ್ಲಿ ಅವಿಭಜಿಕ ದ.ಕ. ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರ ಹೆಚ್ಚಿನ ಒಲವು ವ್ಯಕ್ತವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಜೂ. 4 ರಂದು ಬೆಳ್ತಂಗಡಿ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಬಿಜೆಪಿ ಬೆಂಬಲಿತರಾಗಿ ಕ್ಯಾ| ಗಣೇಶ್ ಕಾರ್ಣಿಕ ಮತ್ತು ಅಯನೂರು ಮಂಜುನಾಥ ಸ್ಪರ್ಧಿಸುತ್ತಿದ್ದು, ಬಿಜೆಪಿ ಪಕ್ಷ ಮಾಡಿದ ನಿರ್ಣಯ ಮತ್ತು ಬಿಜೆಪಿ ಸರಕಾರ ತಮ್ಮ ಅಧಿಕಾರ ಅವಧಿಯಲ್ಲಿ ಶಿಕ್ಷಕರ ಕ್ಷೇತ್ರದಲ್ಲಿ ಮಾಡಿದ ವಿವಿಧ ಕೆಲಸಗಳಿಂದ ಮತದಾರರು ಬಿಜೆಪಿ ಮೇಲೆ ಒಲವು ವ್ಯಕ್ತ ಪಡಿಸುತ್ತಿದ್ದು. ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಅಪವಿತ್ರ ಮೈತ್ರಿ ಸರಕಾರ ನಿಷ್ಕ್ರಿಯವಾಗಿದೆ. ಕಾಂಗ್ರೆಸ್ ಸ್‌ನಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದ್ದು, ಈ ಸರಕಾರ ಹೆಚ್ಚು ದಿನ ಬಾಳುವುದಿಲ್ಲ ಎಂದು ಭವಿಷ್ಯ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾ ಪ್ರಭಾರಿ ಪ್ರತಾಪಸಿಂಹ ನಾಯಕ್, ವಕ್ತಾರ ಹರಿಕೃಷ್ಣ ಬಂಟ್ವಾಳ್, ಪದ್ಮನಾಭ ಅರ್ಕಜೆ, ಜಯಂತ ಕೋಟ್ಯಾನ್, ಸೀತರಾಮ, ರಾಜೇಶ್ ಪೆರ್ಮುಡ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.