ಸ್ಮಿತೇಶ್ ಎಸ್. ಬಾರ್ಯರವರಿಗೆ ಯುವ ಸಾಹಿತ್ಯ ಪ್ರಶಸ್ತಿ ಪ್ರಧಾನ

Advt_NewsUnder_1
Advt_NewsUnder_1

ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಮತ್ತು ಮಹಿಳಾ ಘಟಕದ ಆಶ್ರಯದಲ್ಲಿ ಜೂ.3 ರಂದು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಭಾಕರ್ ನೀರುಮಾರ್ಗ ಯುವ ಸಾಹಿತ್ಯ ಪ್ರಶಸ್ತಿಯನ್ನು ಬೆಳ್ತಂಗಡಿ ಯುವವಾಹಿನಿ ಘಟಕದ ನಿರ್ದೇಶಕ, ಬೆಳ್ತಂಗಡಿ ಶ್ರೀ ಗುರುಮಿತ್ರ ಸಮೂಹದ ಅಧ್ಯಕ್ಷ ಸ್ಮಿತೇಶ್ ಎಸ್.ಬಾರ್ಯ ರವರಿಗೆ ನೀಡಿ ಗೌರವಿಸಲಾಯಿತು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ರಂಗಕರ್ಮಿ ವಿ.ಜಿ ಪಾಲ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ, ವಿಮರ್ಶಕಿ ಬಿ.ಎಂ. ರೋಹಿಣಿ ಯವರಿಗೆ ವಿಶುಕುಮಾರ್ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
ಯುವವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ನಿರ್ದೇಶಕರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.