ಮಕ್ಕಳ ಸಂರಕ್ಷಣಾ ಅಭಿಯಾನ-2018 ಕಾರ್ಯಕ್ರಮ ಉದ್ಘಾಟನೆ.

Advt_NewsUnder_1
Advt_NewsUnder_1

ಬೆಳ್ತಂಗಡಿ:  ಶಿಕ್ಷಣ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ, ಪೊಲೀಸ್ ಠಾಣೆ ಬೆಳ್ತಂಗಡಿ ಮತ್ತು ಸಂಚಾರಿ ಪೊಲೀಸ್ ಠಾಣೆ, ರಾಜ್ಯ ಸರಕಾರಿ ನೌಕರರ ವಿವಿದೋಧ್ಧೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮುಖ್ಯಸ್ಥರುಗಳಿಗೆ ಹಮ್ಮಿಕೊಂಡಿದ್ದ ಮಕ್ಕಳ ಸಂರಕ್ಷಣಾ ಅಭಿಯಾನ- 2018 ಕಾರ್ಯಕ್ರಮವು ಜೂ. 18 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು.

ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಕೆ ಶ್ರೀಧರ ರಾವ್ ಕಳೆಂಜ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ವಿವಿದೋಧ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್, ಶಿಕ್ಷಣ ಇಲಾಖೆಯ ಸುಭಾಷ್ ಜಾದವ್ ಭಾಗಿಯಾಗಿ ಶುಭ ಕೋರಿದರು. ವೇದಿಕೆಯಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರದ ತಾಲೂಕು ಪ್ರ. ಕಾರ್ಯದರ್ಶಿ ಗೋಪಾಲಕೃಷ್ಣ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.