ವಾಣಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ.

Advt_NewsUnder_1
Advt_NewsUnder_1

ಬೆಳ್ತಂಗಡಿ: ಹಳೆಕೋಟೆ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 2018-19 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ಜೂ.23 ರಂದು ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿದರು. ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ. ಸೋಮೇ ಗೌಡ ರವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕಿನ ಬೆಳ್ಳಾರೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಬ್ರಾಯ .ಯು. ರವರು ಕಾರ್ಯಕ್ರಮದಲ್ಲಿ ಭಾಗಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಪದ್ಮಗೌಡ, ವಾಣಿ ಶಿಕ್ಷಣ ಸಂಸ್ಥೆಯ ನಿಕಟ ಪೂವಾಧ್ಯಕ್ಷ ಪಿ.ಕುಶಾಲಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಮೋಹನ್ ಗೌಡ, ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಟಿ.ಜಯಾನಂದ ಗೌಡ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ. ಯದುಪತಿ ಗೌಡ, ಲಕ್ಷ್ಮೀನಾರಾಯಣ.ಕೆ, ರಂಜು ಗೌಡ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಾರಾಯಣ ಗೌಡ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಪರವಾಗಿ ನೂತನ ಶಾಸಕ ಹರೀಶ್ ಪೂಂಜ ರವರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.