ವಾಣಿ ವಿದ್ಯಾ ಸಂಸ್ಥೆ ವತಿಯಿಂದ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ಒಕ್ಕಲಿಗ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವು ಜು.1 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿತು.
ಇದೇ ಸಮಾರಂಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಭೋಜೇ ಗೌಡ ರವರಿಗೆ ಹಾಗೂ ಅಟೋ ರಿಕ್ಷಾ ಚಾಲಕಿ ಬೆದ್ರಬೆಟ್ಟು ಹರಿಣಾಕ್ಷಿ ರತ್ನಾಕರ ಗೌಡ ರವರಿಗೆ ಶಾಲು, ಫಲಪುಷ್ಪ, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.