ಮಳೆಗಾಲದ ನಂತರ ಚಾರ್ಮಾಡಿ ರಸ್ತೆಗೆ ಕಾಂಕ್ರಿಟ್: ಹೆಚ್.ಡಿ ರೇವಣ್ಣ

ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಹೆದ್ದಾರಿ ಪ್ರಾಧಿಕಾರಕ್ಕೆ ೨೫೦ ಕೋಟಿ ರೂ ಪ್ರಸ್ತಾವಣೆ ಸಲ್ಲಿಸಲಾಗುವುದು. ಮಳೆಗಾಲ ಮುಗಿದ ನಂತರ ಈ ರಸ್ತೆಯನ್ನು ಸಂಪೂರ್ಣ ಕಾಂಕ್ರಿಟೀಕರಣ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಜು.1 ರಂದು ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ದುರಸ್ತಿಯಾಗುತ್ತಿರುವ ಶಿರಾಡಿ ಘಾಟ್ ರಸ್ತೆಯನ್ನು ಹತ್ತು ದಿನಗಳಲ್ಲಿ ಸಂಚಾರಕ್ಕೆ ಅನುಮತಿ ನೀಡಲಾಗುವುದು. ಮಲೆನಾಡು-ಕರಾವಳಿ ಸಂಪರ್ಕಿಸುವ ಚಾರ್ಮಾಡಿ, ಆಗುಂಬೆ, ಶಿರಾಡಿ, ಮಡಿಕೇರಿ, ಸಂಪಾಜೆ ಹೆದ್ದಾರಿ ಅಭಿವೃದ್ಧಿಪಡಿಸುವ ಸಲುವಾಗಿ ಸ್ಥಳ ಪರಿಶೀಸಿದ್ದೇನೆ ಎಂದು ಹೇಳಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.