“ಸಿರಿ” ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮ.

ಉಜಿರೆ: ಗರ್ಭಾವಸ್ಥೆಯಲ್ಲಿರುವ ಮಗುವಿಗೂ ಒಂದು ಕಾನೂನು ಅನ್ವಯವಾಗುತ್ತಿದ್ದು ಹುಟ್ಟು, ಬದುಕು, ಸಾವು ಮತ್ತು ಸಾವಿನ ನಂತರ ಕೂಡ ಕಾನೂನು ಯಾರೊಬ್ಬರನ್ನೂ ಬಿಟ್ಟಿರಲು ಸಾಧ್ಯವಿಲ್ಲ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಜಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ. ಎಸ್ ಬೀಳಗಿ ಹೇಳಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಬೆಳ್ತಂಗಡಿ ಇವರ ಆಶ್ರಯದಲ್ಲಿ ಜು.1 ರಂದು ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಮಹಿಳೆಯರಿಗಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆಯನ್ನು ವಕೀಲರ ಸಂಘದ ಉಪಾಧ್ಯಕ್ಷ ವೈ ರಾಧಾಕೃಷ್ಣ ವಹಿಸಿದ್ದರು. ಕಾಯಕ್ರಮದಲ್ಲಿ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರು, ತಾ. ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರೂ ಆಗಿರುವ ಕೋಮಲಾ ಬಿ.ಕೆ, ಹೆಚ್ಚುವರಿ ನ್ಯಾಯಾಧೀಶ ಕೆ. ಎಮ್ ಆನಂದ್, ಧರ್ಮಸ್ಥಳ ಸಿರಿ ಸಂಸ್ಥೆಯ ನಿರ್ದೇಶಕಿ ಮನೋರಮಾ ಭಟ್, ಬೆಳ್ತಂಗಡಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಜಿ.ಕೆ ಕಿರಣ್ ಕುಮಾರ್, ವಕೀಲರ ಸಂಘದ ಪದಾಧಿಕಾರಿ ಬದರಿನಾಥ ಸಂಪಿಗೆತ್ತಾಯ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.