HomePage_Banner_
HomePage_Banner_
HomePage_Banner_

ಉಜಿರೆ: ಮಾದಕ ವಸ್ತುಗಳ ತಡೆಗಟ್ಟುವಿಕೆಗಾಗಿ ಜಾಥಾ ಮತ್ತು ಸಮಾವೇಶ.

Advt_NewsUnder_1

ಧರ್ಮಸ್ಥಳ: ರಾಜ್ಯ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಉಜಿರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಇವರ ಸಂಯುಕ್ತ  ಆಶ್ರಯದಲ್ಲಿ ಮಾದಕ ವಸ್ತುಗಳ ತಡೆಗಟ್ಟುವಿಕೆಗಾಗಿ ಜಾಥಾ ಮತ್ತು ಸಮಾವೇಶ ಹಾಗೂ 2018-19 ರ ರಾಜ್ಯವ್ಯಾಪಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ಕಾರ್ಯಕ್ರಮವು ಜು.2 ರಂದು  ಇಂದ್ರಪ್ರಸ್ಥ ಆಡಿಟೋರಿಯಂ,  ಎಸ್ ಡಿ ಎಂ ಕಾಲೇಜು ಉಜಿರೆ ಇಲ್ಲಿ ಜರುಗಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಲುಮರ ತಿಮ್ಮಕ್ಕ ಅಭಿಯಾನದ ಉದ್ಘಾಟನೆಯನ್ನು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ| ಬಿ ಯಶೋವರ್ಮ,  ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಸತೀಶ್ ಹೊನ್ನವಳ್ಳಿ , ಉಜಿರೆ ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲ ಟಿ.ಎನ್ ಕೇಶವ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಕೆ ಮಹಾವೀರ ಅಜ್ರಿ, ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಸ್ಥಾಪಾಕಾಧ್ಯಕ್ಷ ಕೆ. ವಸಂತ ಸಾಲ್ಯಾನ್ , ಕಾರ್ಯದರ್ಶಿ ವಿವೇಕ್ ವಿ ಪಾಯಿಸ್ ಮೊದಲಾದವರು ವೇದಿಕೆಯಲ್ಲಿ ಗೌರವ  ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.