ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಜು.7 ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಸಭಾಭವನದಲ್ಲಿ ಜರುಗಿತು.
ಶಾಸಕ ಹರೀಶ್ ಪೂಂಜ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ದಾಂಡೇಲಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಸಂದೇಶ್ ಎಸ್.ಜೈನ್ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಸವಣಾಲು ಪ್ರೌಢಶಾಲಾ ವಿದ್ಯಾರ್ಥಿನಿ ಕು| ಉಮಾಶಂಕರಿ ಸಂಘದ ಪರವಾಗಿ  ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.