ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಅಲ್ಫೋನ್ಸ್ ಫ್ರಾಂಕೋ

Advt_NewsUnder_1
Advt_NewsUnder_1

ಬೆಳ್ತಂಗಡಿ: ಕಳೆದ ವಾರವಷ್ಟೇ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಇದರ ರಾಜ್ಯ ಸಮಿತಿಗೆ ಎರಡನೇ ಬಾರಿಗೆ ಚುನಾಯಿತರಾಗಿ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಬೆಳ್ತಂಗಡಿಯ ಹಿರಿಯ ಉದ್ಯಮಿ, ಸೋಜಾ ಎಲೆಕ್ಟ್ರಾನಿಕ್ಸ್ ಮಾಲಕ ಅಲ್ಫೋನ್ಸ್ ಫ್ರಾಂಕೋ ಅವರು ಇದೀಗ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಜು.8 ರಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಚುನಾಯಿತರಾಗಿ ಈ ಪದವಿ ಅಲಂಕರಿಸಿದ್ದಾರೆ.
ಆ ಮೂಲಕ ರಾಷ್ಟ್ರೀಯ ರಾಜಕೀಯ ಪಕ್ಷವೊಂದರಲ್ಲಿ ಕಾರ್ಯದರ್ಶಿಯಂತಹಾ ಉನ್ನತ ಹುದ್ದೆ ಪಡೆದ ಮೊದಲ ಬೆಳ್ತಂಗಡಿಗ ಎಂಬ ಹೆಮ್ಮೆಗೂ ಪಾತ್ರರಾಗಿದ್ದಾರೆ.
ಶಿಕ್ಷಕರಾಗಿದ್ದ ಅವರು ಸ್ವಯಂ ನಿವೃತಿ ಪಡೆದ ಬಳಿಕ ಕ್ರಿಯಾಶೀಲ ಸಂಘಟಕರಾಗಿ ಗುರುತಿಸುತ್ತಾ ಬಳಿಕ ಉದ್ಯಮಿಯಾಗಿ ಹೊರಹೊಮ್ಮಿದ್ದಾರೆ. ಬೆಳ್ತಂಗಡಿಯಲ್ಲಿ ಎಲೆಕ್ಟ್ರಾನಿಕ್ಸ್ ಉದ್ಯಮ ಪ್ರಾರಂಭಿಸಿದ ಹಿರಿಯ ಉದ್ಯಮಿಯಾಗಿದ್ದಾರೆ. ಕುವೆಟ್ಟು ಗ್ರಾ.ಪಂ ಸದಸ್ಯರಾಗಿದ್ದ ಅವರು ಉತ್ತಮ ವಾಗ್ಮಿಯೂ ಹೌದು. ಭಾರತ ಸೇವಾದಳ ಇದರ ಕೇಂದ್ರ ಸ್ಥಾಯಿ ಸಮಿತಿ ಸದಸ್ಯರಾಗಿದ್ದು ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯೂ ಆಗಿದ್ದಾರೆ.
ಶಿಕ್ಷಣ ಪ್ರೇಮಿಯಾಗಿರುವ ಅವರು ಅನೇಕ ಮಂದಿ ಅರ್ಹ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮೂಲಕ ಅಂತವರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ. ಸತತ 7 ನೇ ಬಾರಿಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ ಪಡೆದ ಗುರುವಾಯನಕೆರೆ ಸರಕಾರಿ ಶಾಲೆ “ನಮ್ಮೂರ ಶಾಲೆ” ಇದರ ಆಡಳಿತ ಮಂಡಳಿಯ ಸದಸ್ಯರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ನಡೆಸುವ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು ಇದರ ಸಲಹಾ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ರಾಷ್ಟ್ರೀಯ ರಾಜಕೀಯ ಪಕ್ಷವಾದ ಎಸ್‌ಡಿಪಿಐ ಯ ಆಂದೋಲನದಲ್ಲಿ ಪ್ರಾರಂಭದಿಂದಲೂ ತೊಡಗಿಸಿಕೊಂಡಿದ್ದ ಅಲ್ಫೋನ್ಸ್ ಪ್ರಾಂಕೋ ಅವರು ಪಕ್ಷಕ್ಕಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಪಕ್ಷದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾಗಿಯೂ ಇದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.