ಶಾಲಾ ತೋಟ ನಿರ್ಮಾಣ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಗೆ ಪೂರಕ: ತಾ.ಪಂ. ಅಧ್ಯಕ್ಷೆ

ಬೆಳ್ತಂಗಡಿ : ದ.ಕ. ಜಿ.ಪಂ, ಅಕ್ಷರದಾಸೋಹ ಯೋಜನೆ ಬೆಳ್ತಂಗಡಿ, ತಾ.ಪಂ ಬೆಳ್ತಂಗಡಿ ಇದರ ಆಶ್ರಯದಲ್ಲಿ ನರೇಗಾ ಯೋಜನೆ ಬೆಳ್ತಂಗಡಿ ಇವರ ಸಹಕಾರದಲ್ಲಿ ತಾಲೂಕಿನ 241 ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಅಕ್ಷರ ಕೈತೋಟ ನಿರ್ಮಾಣದ ಬಗ್ಗೆ ಮಾಹಿತಿ ಕಾರ್ಯಾಗಾರ ಜು.11 ರಂದು ಬೆಳ್ತಂಗಡಿ ಸಂತ ತೆರೆಸಾ ಪ್ರೌಢ ಶಾಲಾ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ ಅವರು ಮಾತನಾಡಿ ಮಕ್ಕಳು ಮಾನಸಿಕವಾಗಿ, ಸದೃಢವಾಗಿ, ಆರೋಗ್ಯವಂತರಾಗಿ, ಬುದ್ಧಿವಂತರಾಗಿ ಮೂಡುವಲ್ಲಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳು ಅವಶ್ಯ. ಮಕ್ಕಳಲ್ಲಿ ಪರಿಸರ ಕಾಳಜಿಯ ಜೊತೆಗೆ, ಸಸ್ಯಗಳ ನಾಟಿ ಹಾಗೂ ಪಾಲನೆ ಮಾಡುವ ಅನುಭವ ದೊರೆಯುತ್ತದೆ. ಕೈತೋಟದ ತರಕಾರಿಗಳನ್ನು ಬಿಸಿಯೂಟಕ್ಕೆ ಬಳಕೆ ಮಾಡುವುದರಿಂದ ಉತ್ತಮ ಆರೋಗ್ಯಕ್ಕೂ ಕಾರಣವಾಗುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಬಸವರಾಜ ಅಯ್ಯಣ್ಣನವರ್ ಮಾತನಾಡಿ ಉದ್ಯೋಗ ಖಾತರಿ ಮೂಲಕ ಶಾಲೆಗಳಲ್ಲಿ ಅಕ್ಷರ ಕೈತೋಟ ನಿರ್ಮಾಣಕ್ಕೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಭಾಸ್ಟೀನ್ ಅವರು ಶಾಲೆಗಳಲ್ಲಿ ಕೈತೋಟ ನಿರ್ಮಾಣ ಮಾಡಿ ಬಿಸಿಯೂಟಕ್ಕೆ ಬಳಕೆ ಉತ್ತಮವಾದ ಯೋಜನೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ್, ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಲಕ್ಷ್ಮಣ ಶೆಟ್ಟಿ, ಉದ್ಯೋಗ ಖಾತರಿ ಯೋಜನೆ ಸಹಾಯಕ ನಿರ್ದೇಶಕ ಕುಸುಮಾಧರ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶಿವಪ್ರಸಾದ್ ಅಕ್ಷರ ಕೈತೋಟ ಕುರಿತು ವಿವಿಧ ಮಾಹಿತಿಗಳನ್ನು ನೀಡಿದರು.
ವೇದಿಕೆಯಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ ನಾರಾವಿ, ಕಾರ್ಯದರ್ಶಿ ರಘುಪತಿ ರಾವ್, ಯಶೋಧರ ಸುವರ್ಣ, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ, ಬೆಳಾಲು ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಸಂತ ತೆರೆಸಾ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಸಿ| ಲೀನಾ ಡಿ’ ಸೋಜಾ, ಬೀರಾದಾರ್ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ತಾಲೂಕಿನ ೨೪೧ ಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.
ಶಾಲಾ ಮಕ್ಕಳ ಪ್ರಾರ್ಥನೆ ಬಳಿಕ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಕುಸುಮಾಧರ್ ಸ್ವಾಗತಿಸಿದರು. ಶಿಕ್ಷಣ ಇಲಾಖೆಯ ಅಧಿಕಾರಿ ಸುಭಾಶ್ ಜಾದವ್ ಕಾರ್ಯಕ್ರಮ ನಿರೂಪಿಸಿ ಕೃಷ್ಣಕುಮಾರ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.