ಲಾಯಿಲ: ಅಂಗನವಾಡಿ ಕಟ್ಟಡಗಳ ಉದ್ಘಾಟನೆ ಮತ್ತು ಹಿಂದೂ ರುದ್ರ ಭೂಮಿ ಲೋಕಾರ್ಪಣೆ.

Advt_NewsUnder_1
Advt_NewsUnder_1
Advt_NewsUnder_1

ಲಾಯಿಲ:  ಲಾಯಿಲ ಗ್ರಾಮದ ಪುತ್ರಬೈಲು, ಪಡ್ಲಾಡಿ ಮತ್ತು ಹಂದೇವೂರು ಎಂಬಲ್ಲಿ ನೂತನವಾಗಿ ನಿರ್ಮಿಸಿದ  ಅಂಗನವಾಡಿ ಕಟ್ಟಡಗಳ ಉದ್ಘಾಟನೆ ಮತ್ತು ನವೀಕೃತ ಸಾರ್ವಜನಿಕ ಹಿಂದೂ ರುದ್ರಭೂಮಿ ‘ಮುಕ್ತಿಧಾಮ’ ಇದರ ಲೋಕಾರ್ಪಣಾ ಸಮಾರಂಭ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಜು.14 ರಂದು ಜರುಗಿತು. ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾ ನೆರವೇರಿಸಿದರು. ಲಾಯಿಲ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ವೀಣಾ ರಾವ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ದ.ಕ.ಜಿ.ಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ.ಆರ್ ರವಿ, ಶ್ರೀ.ಕ್ಷೇ.ಧ. ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಬಿ.ಕೆ ಧನಂಜಯ ರಾವ್ ದರ್ಪಿಂಜ, ದ.ಕ.ಜಿ.ಪಂ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಜಿ.ಪಂ ಸದಸ್ಯೆ ಸೌಮ್ಯಲತಾ ಜಯಂತ ಗೌಡ, ತಾ.ಪಂ ಸದಸ್ಯ ಸುಧಾಕರ ಬಿ.ಎಲ್, ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸುಂದರ ಪೂಜಾರಿ, ದ.ಕ ಜಿ.ಪಂ ಇಂ.ಉಪವಿಭಾಗದ ಸಿ.ಆರ್ ನರೇಂದ್ರ, ಹಿರಿಯ ಶಾಖಾಧಿಕಾರಿ ಪ್ರೇಮನಾಥ ರಾವ್, ಉಪಸ್ಥಿತರಿದ್ದರು.

 ರುದ್ರಭೂಮಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಶೆಟ್ಟಿ ,ಲಾಯಿಲ ಗ್ರಾ.ಪಂ ಉಪಾಧ್ಯಕ್ಷ ಗಿರೀಶ್ ಡೋಗ್ರೆ, ಪಿಡಿಒ ಪಿ ಹೆಚ್ ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.