ಬೆಳ್ತಂಗಡಿ ಪಟ್ಟಣ ಪಂಚಾಯತ್ ಪೌರ ಕಾರ್ಮಿಕರ ಪ್ರತಿಭಟನೆ.

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರ ಕಾರ್ಮಿಕರು, ಪೌರ ಕಾರ್ಮಿಕ ಶೋಷಣೆ ವಿರುದ್ದ ಜು.13 ರಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ  ನಡೆಸುತ್ತಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣ ಸೇರಿದಂತೆ, ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲೆಂದರಲ್ಲಿ ಕಸದ ರಾಶಿಗಳೇ ಕಾಣಸಿಗುತ್ತಿದೆ. ವಿಪರೀತ ಮಳೆಯಿಂದಾಗಿ ಕಸ ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡು ದುರ್ನಾಥ ಬೀರುತ್ತಿದೆ. ಈಗಾಗಲೇ ಹಲವಾರು ಸಾಂಕ್ರಾಮಿಕ ರೋಗಗಳು , ವಿವಿಧ ರೀತಿಯ ಜ್ವರದಿಂದ ಜನರು ನರಳುತ್ತಿದ್ದು, ಇದೀಗ ರಾಶಿ ಬಿದ್ದಿರುವ ಕಸದಿಂದಾಗಿ ಸೊಳ್ಳೆಗಳು ಉತ್ಪತ್ತಿಯಾಗುವ ಸಂಭವವಿದೆ. ಪೌರ ಕಾರ್ಮಿಕರು ಕಸವಿಲೇವಾರಿ ನಡೆಸದೇ ಪ್ರತಿಭಟನೆ ನಡೆಸುತ್ತಿದ್ದು, ಶಾಸಕ ಹರೀಶ್ ಪೂಂಜ ರವರು ಸ್ಥಳಕ್ಕೆ ಭೇಟಿ ನೀಡಿ, ಕಾರ್ಮಿಕರಿಂದ ಮನವಿ ಸ್ವೀಕರಿಸಿ, ಮುಷ್ಕರದ ಕುರಿತು ಡಿಸಿ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವಂತೆ ತಹಶೀಲ್ದಾರ್ ಮದನ್ ಮೋಹನ್ ರವರಿಗೆ ಸೂಚನೆ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.