ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗ್ರಹಿಸಿ ಕ್ಯಾಂಪಸ್ ಫ್ರಂಟ್‌ ವತಿಯಿಂದ ಪ್ರತಿಭಟನೆ.

ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್‌ ಕರ್ನಾಟಕ, ರಾಜ್ಯಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್‌ ಬೆಳ್ತಂಗಡಿ ವತಿಯಿಂದ ಜು.20 ರಂದು ಬೆಳ್ತಂಗಡಿಯ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.

‌ಈ ಸಂಧರ್ಭದಲ್ಲಿ ಮಾತನಾಡಿದ ಕ್ಯಾಂಪಸ್ ಫ್ರಂಟ್‌ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲ ಪುಂಜಾಲಕಟ್ಟೆ , ಈ ಹಿಂದೆ ಚುನಾವಣಾ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದ ಜೆ.ಡಿ‌.ಎಸ್ ಮತ್ತು ಕಾಂಗ್ರೆಸ್ ಪಕ್ಷಗಳು, ಸಮ್ಮಿಶ್ರ ಸರ್ಕಾರವನ್ನು ರಚಿಸಿದ ಬಳಿಕ ವಿದ್ಯಾರ್ಥಿಗಳಿಗೆ ಮೋಸ ಮಾಡುತ್ತಿದ್ದು, ಉಚಿತ ಬಸ್ ಪಾಸ್ ವ್ಯವಸ್ಥೆ ಜಾರಿಗೆ ಬರುವವರೆಗೆ , ಕ್ಯಾಂಪಸ್ ಫ್ರಂಟ್‌ ತನ್ನ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದರು.

ಪ್ರತಿಭಟನೆಯು ಕ್ಯಾಂಪಸ್ ಫ್ರಂಟ್‌ ಬೆಳ್ತಂಗಡಿ ತಾಲೂಕು ಅದ್ಯಕ್ಷ ವಝೀರ್’ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಕಿರ್ ಪಾಂಡವರಕಲ್ಲು, ಕ್ಯಾಂಪಸ್ ಫ್ರಂಟ್‌ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಶಾಹಿದ್ ಹಾಗೂ ತಾಲೂಕು ಸಮಿತಿ ಸದಸ್ಯರುಗಳಾದ ಇಮ್ರಾನ್, ದರ್ವೀಝ್, ಮಿದ್ಲಾಜ್, ಮುಸ್ತಫ, ಝಾಹಿದ್, ಸಫ್ವಾನ್, ಉಸ್ಮನ್, ಹರ್ಶಾದ್, ಫಾತಿಮ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.