HomePage_Banner_
HomePage_Banner_

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ಎಂ.ಎಂ. ಸುಧಾಕರ್.

ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ಎಂ. ಎಂ ಸುಧಾಕರ್ ಉಜಿರೆ ನೇಮಕಗೊಂಡಿದ್ದಾರೆ. ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿರುವ ಜಿಲ್ಲಾ ನಗರಾಭಿವೃದ್ಧಿ ಕೋಶ ಮಂಗಳೂರು ಇಲ್ಲಿನ ಕಚೇರಿ ವ್ಯವಸ್ಥಾಪಕರಾಗಿರುವ ಅವರು ಮುಂದಿನ ಆದೇಶದವರೆಗೆ ವಾರದಲ್ಲಿ 3 ದಿನ ಬೆಳ್ತಂಗಡಿ ಕಚೇರಿಯಲ್ಲಿ ಮುಖ್ಯಾಧಿಕಾರಿಯಾಗಿ ಕೆಲಸ ನಿರ್ವಹಿಸಲಿದ್ದಾರೆ.
ಉಜಿರೆ ಶಿವಾಜಿ ನಗರ ಇಂಜಿನಿಯರ್‍ಸ್ ಎಸ್ಟೇಟ್ ನಿವಾಸಿಯಾಗಿರುವ ಸುಧಾಕರ್ ಅವರು ಪ್ರಥಮ ದರ್ಜೆ ಸಹಾಯಕರಾಗಿ ಸರಕಾರಿ ಹುದ್ದೆಗೆ ನೇಮಕಗೊಂಡವರು ಬಳಿಕ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ, ಕೊಡಗಿನ ಸೋಮವಾರಪೇಟೆ, ಉತ್ತರ ಕನ್ನಡದ ಅಂಕೋಲದಲ್ಲಿ ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ಮುಖ್ಯಾಧಿಕಾರಿಯಾಗಿ ಕೆಲಸ ನಿರ್ವಹಿಸಿ ಅನುಭವ ಪಡೆದವರಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.