ಬೆಳ್ತಂಗಡಿ: ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಉತ್ಸವ ಕಾರ್ಯಕ್ರಮವು ಇಂದು(ಜು.27) ತಾಲೂಕು ಕಚೇರಿ ಸಭಾಂಗಣದಲ್ಲಿ ಜರುಗಿತು.
ಶಾಸಕ ಹರೀಶ್ ಪೂಂಜ ರವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ತಹಶೀಲ್ದಾರ್ ಮದನ್ ಮೋಹನ್, ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ತಾ.ಪಂ ಉಪಾಧ್ಯಕ್ಷೆ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ಸೆಬಾಸ್ಟಿಯನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.