ಕಳಿಯ ಪ್ರಾ.ಕೃ.ಪ.ಸಹಕಾರಿ ಸಂಘ ಸಿಇಒ ಎಸ್.ಹರಿಪ್ರಸಾದ್ ರವರಿಗೆ ಬೀಳ್ಕೊಡುಗೆ.

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗೇರುಕಟ್ಟೆ ಇಲ್ಲಿ ಕಳೆದ 41 ವರ್ಷಗಳಿಂದ ಸುಧೀರ್ಘ ಅವಧಿಯಲ್ಲಿ ಕಾರ್ಯದರ್ಶಿಯಾಗಿ, ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಜೂ.30 ರಂದು ಸೇವೆಯಿಂದ ನಿವೃತ್ತರಾದ ಕೆ ಎಸ್ ಹರಿಪ್ರಸಾದ್ ರವರಿಗೆ ಬೀಳ್ಕೊಡುಗೆ ಸಮಾರಂಭವು ಆ.5 ರಂದು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಹಕಾರಿ ಭವನದಲ್ಲಿ ಜರುಗಿತು.
ಕಳಿಯ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಂಗಳೂರು ಸಹಕಾರಿ ಬ್ಯಾಂಕ್ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್, ಜಿ.ಪಂ ಸದಸ್ಯೆ ಮಮತಾ.ಎಂ.ಶೆಟ್ಟಿ, ಎ.ಪಿ.ಎಂ.ಸಿ ಬೆಳ್ತಂಗಡಿ ನಿರ್ದೇಶಕ ಸೆಲಿಸ್ಟಿನ್ ಡಿಸೋಜಾ, ಮಂಗಳೂರು ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಕಳಿಯ ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಉಪ್ಪಿನಂಗಡಿ ಸ.ಪ.ಪೂ.ಕಾಲೇಜು ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ,  ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಕನ್ಯಾ, ಬೆಳ್ತಂಗಡಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಶ್ರೀನಿವಾಸ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಲಯ ಮೇಲ್ವಿಚಾರಕ ಸಂದೇಶ್ ಕುಮಾರ್,ಉಪಾಧ್ಯಕ್ಷ ರಾಜೀವ ಗೌಡ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.