ಸಂಪತ್ ಬಿ. ಸುವರ್ಣರಿಗೆ ಯುವ ಸಾಧನಾ ಪ್ರಶಸ್ತಿ.

Advt_NewsUnder_1
Advt_NewsUnder_1

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ. ಸುವರ್ಣರಿಗೆ ಯುವ ವಾಹಿನಿ ಕೇಂದ್ರ ಸಮಿತಿ ಮಂಗಳೂರು ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಯುವ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.
ಮಂಗಳೂರು ಫಾದರ್ ಮುಲ್ಲರ್‍ಸ್ ಕನ್ವೆಶ್ಯನ್ ಸೆಂಟರ್‌ನಲ್ಲಿ ಜರಗಿದ ಯುವ ವಾಹಿನಿಯ 31 ನೇ ವಾರ್ಷಿಕ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆಯಾದ ಶ್ರೀಮತಿ ಡಾ| ಜಯಮಾಲರವರು ಮತ್ತು ವಿಧಾನ ಪರಿಷತ್‌ನ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿಯವರು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಯುವ ವಾಹಿನಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಇತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.