ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಗೌಡ ರವರು ಸಹಕಾರ ಭಾರತಿ ದ.ಕ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾಗಿ, ಕೆಂಪಕೋಡಿ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.