ಶಿರ್ಲಾಲು: ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಪ್ರಾಯೋಜಕತ್ವದಲ್ಲಿ, ನವೋದಯ ಸ್ವಸಹಾಯ ಸಂಘಗಳ ಒಕ್ಕೂಟ ಶಿರ್ಲಾಲು ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ 15 ನೇ ವರ್ಷದ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಶಿರ್ಲಾಲು ಸಿ.ಎ ಬ್ಯಾಂಕ್ ಕಟ್ಟಡದ ನವೋದಯ ಸಭಾಭವನದಲ್ಲಿ ಆ.೧೮ ರಂದು ಜರುಗಿತು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ| ಪಿ.ಹೆಚ್.ಎಫ್ ಜಗದೀಶ್ ಪ್ರಸಾದ್ ಉದ್ಘಾಟನೆಯನ್ನು ನೆರವೇರಿಸಿದರು. ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ಕೆ. ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿರ್ಲಾಲು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಸುಲ್ಕೇರಿಮೊಗ್ರು ಸಿ.ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಹೆಚ್ ನಿತ್ಯಾನಂದ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಲಯ ಮೇಲ್ವಿಚಾರಕ ಸಂದೇಶ್ ಕುಮಾರ್, ಸ್ವಸಹಾಯ ಸಂಘ ತಾಲೂಕು ಸಂಯೋಜಕ ಕೂಸಪ್ಪ ಎನ್ ಹಾಗೂ ಸಿ.ಎ ಬ್ಯಾಂಕ್ ನಿರ್ದೇಶಕರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.