ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ. ಸಂಘದಲ್ಲಿ ಜೀವನೋತ್ಸಾಹ ತರಬೇತಿ

ಬೆಳ್ತಂಗಡಿ : ಯುವ ಜನತೆ ನಮ್ಮ ದೇಶದ ಆಸ್ತಿ ಮತ್ತು ಸಂಪತ್ತು ಶೇ 70% ನಮ್ಮ ದೇಶದಲ್ಲಿ ಯುವ ಜನತೆ ಇದ್ದು ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ನಾಯಕತ್ವ ಗುಣಗಳನ್ನು ಯುವಕರು ಪಡೆದರೆ ಪ್ರತಿಯೊಬ್ಬ ವ್ಯಕ್ತಿ ಶಕ್ತಿಯಾಗಿ ಬೆಳೆಯಲು ಸಾಧ್ಯವಿದೆ ಎಂದು ಮೂಲ್ಕಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಪೀತಾಂಬರ ಹೇರಾಜೆ ಹೇಳಿದರು.
ಅವರು ಆ.22 ರಂದು ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲ ಮೂಲ್ಕಿ ಶ್ರೀ.ಗು.ನಾ.ಸ್ವಾ.ಸೇ ಸಂಘ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ನಡೆದ ಜೀವನೋತ್ಸಹ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ ವಹಿಸಿ ಮಾತನಾಡಿ ನಮ್ಮ ಸಮಾಜದ ವಿದ್ಯಾರ್ಥಿಗಳು ಇಂತಹ ತರಬೇತಿ ಕಾರ್ಯಗಾರದಲ್ಲಿ ತೊಡಗಿಸಿಕೊಂಡು ವ್ಯಕ್ತಿತ್ವ ವಿಕಸನದ ಮೂಲಕ ಸಮಾಜದಲ್ಲಿ ಒರ್ವ ಶ್ರೇಷ್ಠ ವ್ಯಕ್ತಿಯಾಗಿ ಬದುಕಲು ಸಾಧ್ಯವಿದೆ ಎಂದರು.
ಸಂಪನ್ಮೂಲ ವ್ಯಕ್ತಿ ರಾಷ್ಟ್ರೀಯ ತರಬೇತುದಾರ ಸುಧಾಕರ ಪೂಜಾರಿ ಕಾರ್ಕಳ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ರಾಜಶ್ರೀ ವಿ. ರಮಣ್, ಯುವ ಬಿಲ್ಲವ ವೇದಿಕೆಯ ಉಪಾಧ್ಯಕ್ಷ ಯೋಗೀಶ್ ಮಜಕುಡೇಲು, ಕೋಶಾಧಿಕಾರಿ ಚಂದ್ರಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭವ್ಯ, ಸ್ವಾತಿ ಪ್ರಾರ್ಥನೆ ಹಾಡಿ, ಯುವಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್ ಉಪ್ಪಾರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿ, ಸುರೇಶ್ ಮಾಚಾರು ಕಾರ್ಯಕ್ರಮ ನಿರೂಪಿಸಿ, ಯುವಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿ ರಂಜಿತ್ ಹೆಚ್.ಡಿ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.