ಯಕ್ಷಗಾನ ಕಲಾವಿದ ಫಕೀರ.ಕೆ ನಿಧನ

Advt_NewsUnder_1
Advt_NewsUnder_1

ಕೊಯ್ಯೂರು ಗ್ರಾಮದ ವರ್ಪಾಳೆ ಮನೆಯ ಫಕೀರ.ಕೆ (76.ವ) ರವರು ಆ.19 ರಂದು ನಿಧನರಾದರು. ಇವರು ಶಿಕ್ಷಣ ಇಲಾಖೆಯಲ್ಲಿ ಉದ್ಯೋಗಿಯಾಗಿ ನಿವೃತ್ತ ಜೀವನ ನಡೆಸುತ್ತಿದ್ದರು. ಇವರು ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದರು ಹಾಗೂ ಯಕ್ಷಗಾನದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದರು. ಗೇರುಕಟ್ಟೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡುತ್ತಿದ್ದರು. ಬೆಳ್ತಂಗಡಿ ಮೊಗೇರ ಸಮಾಜ ಸೇವಾ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದು, ಉಜಿರೆ ಬ್ರಹ್ಮ ಮೊಗೆರ್ಕಳ ದೈವಸ್ಥಾನದಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಮೂರು ಗಂಡು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.