ಎಸ್.ಡಿ.ಪಿ.ಐ ನೂತನ ರಾಜ್ಯಾಧ್ಯಕ್ಷರಿಗೆ ಬೆಳ್ತಂಗಡಿಯಲ್ಲಿ ಸನ್ಮಾನ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ನೂತನ ರಾಜ್ಯಾಧ್ಯಕ್ಷರಾದ ಇಲ್ಯಾಸ್ ಮಹಮ್ಮದ್ ತುಂಬೆ ಯವರಿಗೆ ಹಾಗೂ ಕೇರಳ ರಾಜ್ಯದ ನೂತನ ಪ್ರಧಾನ ಕಾರ್ಯದರ್ಶಿ ರಾಯ್ ಅರೆಕಲ್ ರವರಿಗೆ ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಜೆಎಂಎಫ್ ಸಭಾಭವನದಲ್ಲಿ ಸನ್ಮಾನಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷರಾದ ನವಾಝ್ ಶರೀಪ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಗಳಾದ ಅಲ್ಪೋನ್ಸ್ ಪ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ರಾಜ್ಯ ಉಪಾಧ್ಯಕ್ಷ ಅಡ್ವೊಕೇಟ್ ಮಜೀದ್ ಖಾನ್, ಎಸ್.ಡಿ.ಪಿ.ಐ ದ.ಕ.ಜಿಲ್ಲಾ ಅಧ್ಯಕ್ಷ  ಅತಾವುಲ್ಲಾ ಜೋಕಟ್ಟೆ, ಎಸ್.ಡಿ.ಪಿ.ಐ ಜಿಲ್ಲಾ ಉಪಾಧ್ಯಕ್ಷ ಅಂತೋಣಿ ಪಿ.ಡಿ, ಜಿಲ್ಲಾ ಸಮಿತಿ ಸದಸ್ಯರಾದ ಆನಂದ ಮಿತ್ತಬೈಲ್, ಅಕ್ಬರ್ ಬೆಳ್ತಂಗಡಿ, ಭಾಗವಹಿಸಿದ್ದರು. ತಾಲೂಕು ಉಪಾಧ್ಯಕ್ಷ  ಹೈದರ್ ನೀರ್ಸಾಲ್ ಸ್ವಾಗತಿಸಿ, ಕಾರ್ಯದರ್ಶಿಗಳಾದ ಹನೀಪ್ ಟಿ.ಎಸ್ ಧನ್ಯವಾದ ವಿತ್ತು, ನಿಸಾರ್ ಎಸ್.ಕೆ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.