ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾವ್ಯಯಾನ

Advt_NewsUnder_1
Advt_NewsUnder_1

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಕನ್ನಡ ಸಾಹಿತ್ಯ ಸಂಘದ ಆಶ್ರಯದಲ್ಲಿ ಕಾವ್ಯಯಾನ ಕಾರ್‍ಯಕ್ರಮವು ಜರಗಿತು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ ರಾವ್ ಕಲ್ಮಂಜರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀಮತಿ ಜೋಲಿ ವಹಿಸಿದ್ದರು.
ಕರ್ನಾಟಕ ಭಾಗವತದ ಬಲಿಚಕ್ರವರ್ತಿ ಕಥಾ ಭಾಗವನ್ನು ಗಮಕಿಗಳಾದ ಶ್ರೀಮತಿ ಮನೋರಮಾ ತೋಳ್ಪಡಿತ್ತಾಯರು ಪ್ರವಚನಗೈದರು. ಶ್ರೀ ಧ.ಮ. ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ| ರಾಜಶೇಖರ್‌ರವರು ಪ್ರವಚನ ಮಾಡಿದರು. ಸಾಹಿತ್ಯ ಪರಿಷತ್ತಿನ ಕಾರ್‍ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲುರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್‍ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.