HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಶ್ರೀರಾಮ ಕ್ಷೇತ್ರದಲ್ಲಿ ರಾಷ್ಟ್ರೀಯ ಧರ್ಮಸಂಸದ್ ಉದ್ಘಾಟನೆ

ಧರ್ಮಸ್ಥಳ: ಇಲ್ಲಿಯ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಸಂದರ್ಭದಲ್ಲಿ, ರಾಷ್ಟ್ರೀಯ ಧರ್ಮಸಂಸದ್‌ನ ಉದ್ಘಾಟನಾ ಕಾರ್ಯಕ್ರಮವು ಇಂದು (ಸೆ.3) ಶ್ರೀ ಆತ್ಮಾನಂದ ಸರಸ್ವತಿ ವೇದಿಕೆಯಲ್ಲಿ ನೆರವೇರಿತು. ಉದ್ಘಾಟನೆಯನ್ನು ಶ್ರೀ ಮಹಂತ್ ದೇವಾನಂದ ಸರಸ್ವತಿ ಸ್ವಾಮೀಜಿಯವರು ನೆರವೇರಿಸಿ ದಿಕ್ಸೂಚಿ ಭಾಷಣವನ್ನು ಮಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಮೂರ್ತಿ ಲಕ್ಷ್ಮೀಪತಿ ಗೋಪಾಲಾಚಾರ್ಯ ಮತ್ತು ಬಳಗದವರು ವೈದಿಕ ಪ್ರಾರ್ಥನೆಯನ್ನು ನೆರವೇರಿಸಿದರು. ರಾಷ್ಟ್ರೀಯ ಧರ್ಮ ಸಂಸದ್ ವ್ಯವಸ್ಥಾಪನಾ ಸಮಿತಿ ಪ್ರಧಾನ ಸಂಚಾಲಕ ಸತ್ಯಜಿತ್ ಸುರತ್ಕಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ಶ್ರೀರಾಮ ಕ್ಷೇತ್ರ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಮಠಾಧೀಶರಾದ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಮಠಾಧೀಶರಾದ ಮೋಹನದಾಸ ಪರಮಹಂಸ ಸ್ವಾಮೀಜಿ, ಕೇಂದ್ರ ಅಂಕಿ ಅಂಶ ಮತ್ತು ಯೋಜನಾ ಅನುಷ್ಠಾನ ಖಾತೆ ಸಚಿವ ಡಿ.ವಿ ಸದಾನಂದ ಗೌಡ, ರಾಜ್ಯ ಸಭಾ ಸದಸ್ಯ ಬಿ.ಕೆ ಹರಿಪ್ರಸಾದ್, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಧರ್ಮಸಂಸದ್ ಕಾರ್ಯನಿರ್ವಾಹಕ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ, ರಾಜ್ಯ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ| ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಕೇತ್ರದ ಶಾಸಕ ವೇದವ್ಯಾಸ ಕಾಮತ್, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ,ಕಾರ್ಕಳ ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಯು.ವಿಜಯ ರಾಘವ ಪಡ್ವೆಟ್ನಾಯ ಗೌರವ ಉಪಸ್ಥಿತರಿದ್ದರು.

ಸುಮಾರು 108 ಯತಿವರ್ಯರು ಪ್ರಧಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಮಾರು 300 ಪ್ರಮುಖ ಗಣ್ಯಾತಿಗಣ್ಯರು ಪ್ರತ್ಯೇಕ ವೇದಿಕೆಯಲ್ಲಿ ಆಸೀನರಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.