ಡಾ|ಪ್ರಶಾಂತ ಶೆಟ್ಟಿಯವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Advt_NewsUnder_1
Advt_NewsUnder_1

ಉಜಿರೆ: ಕರ್ನಾಟಕದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಲ್ಲಿ ಜರಗುವ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದಲ್ಲಿ ಶೈಕ್ಷಣಿಕ ಮತ್ತು ಸಂಶೋಧನೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ವಿಶ್ವ ವಿದ್ಯಾನಿಲಯದ ಶಿಕ್ಷಕರಿಗೆ ಕೊಡಮಾಡುವ 2018ರ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಹಾಗೂ ಮುಖ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ|ಪ್ರಶಾಂತ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

ಸೆ.5 ರಂದು ವಿಶ್ವ ವಿದ್ಯಾನಿಲಯದಲ್ಲಿ ಜರಗುವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಿ.ಕೆ.ಶಿವಕುಮಾರ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.