ಉಜಿರೆಯ ಖಾಸಗಿ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಕಳೆಂಜ ಗ್ರಾಮದ ಕಾಟ್ಲಾಜೆ ಮನೆ ನೋಣಯ್ಯ ಗೌಡ ಮತ್ತು ಹರಿಣಾಕ್ಷಿ ದಂಪತಿಯ ಏಕೈಕ ಪುತ್ರಿ ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಕು| ಸುನೀತಾ (16.ವ) ರವರು ಸೆ. 3 ರಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸುನೀತಾ ರವರು ಪುತ್ತೂರು ಕೊಂಬೆಟ್ಟು ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದು, ಪ್ರಥಮ ಪಿಯುಸಿಯಲ್ಲಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿದ್ದರು. ಇತ್ತೀಚೆಗೆ ನಡೆದಿದ್ದ ಸೆಮಿಸ್ಟರ್ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಲಭಿಸಿದ್ದ ಹಿನ್ನೆಲೆಯಲ್ಲಿ ನೊಂದು ಅವರು ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆಸಲಾಯಿತು.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.