HomePage_Banner_
HomePage_Banner_
HomePage_Banner_

ಸೆ.12: ನಾಲ್ಕೂರು ಹಾ.ಉ.ಸ.ಸಂಘದ ನೂತನ ಕಟ್ಟಡ ಕಾಮಧೇನು ಉದ್ಘಾಟನೆ

ಬಳೆಂಜ: ನಾಲ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕಾಮಧೇನು ಸೆ.12 ರಂದು ಉದ್ಘಾಟನೆಗೊಳ್ಳಲಿದೆ. ನೂತನ ಕಟ್ಟಡವನ್ನು ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಉದ್ಘಾಟಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ ಹಾಲು ಒಕ್ಕೂಟದ ನಿರ್ದೇಶಕರುಗಳಾದ ಬಿ.ನಿರಂಜನ್, ಕೆ. ಸೀತಾರಾಮ ರೈ, ಪದ್ಮನಾಭ ಶೆಟ್ಟಿ ಅರ್ಕಜೆ, ಶ್ರೀಮತಿ ವೀಣಾ ರೈ, ನಾರಾಯಣ ಪ್ರಕಾಶ್, ವ್ಯವಸ್ಥಾಪಕ ನಿರ್ದೇಶಕ ಡಾ| ಬಿ.ವಿ. ಸತ್ಯನಾರಾಯಣ, ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಸಹಕಾರಿ ಸಂಘಗಳ ಪುತ್ತೂರು ವಿಭಾಗದ ಸಹಾಯಕ ನಿಬಂಧಕ ಎನ್.ಕೆ.ಗೋಪಾಲಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಡಾ| ನಿತ್ಯಾನಂದ ಭಕ್ತ, ಡಾ| ಎಂ.ರಾಮಕೃಷ್ಣ ಭಟ್, ಜಿ.ಪಂ ಸದಸ್ಯ ಶೇಖರ ಕುಕ್ಕೇಡಿ, ತಾ.ಪಂ ಸದಸ್ಯೆ ವಿನೂಷಾ ಪ್ರಕಾಶ್, ಮಾಜಿ. ತಾ.ಪಂ ಸದಸ್ಯ ಧರ್ಣಪ್ಪ ಪೂಜಾರಿ, ಸಂಘದ ಸ್ಥಾಪಕಾಧ್ಯಕ್ಷ ವಿಶ್ವನಾಥ ಹೊಳ್ಳ, ಬಳೆಂಜ ಗ್ರಾ.ಪಂ ಅಧ್ಯಕ್ಷೆ ದೇವಕಿ, ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಗೌರವ ಉಪಸ್ಥಿತರಿರುವರು.
ಅಧ್ಯಕ್ಷ ವಸಂತ ಶೆಟ್ಟಿ ಮಜಲು, ಬೆಳ್ತಂಗಡಿ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರಾ, ಪಶುವೈದ್ಯಾಧಿಕಾರಿ ಡಾ| ದಿನೇಶ್ ಸರಳಾಯ, ಸಂಘದ ಕಾರ್ಯದರ್ಶಿ ಶ್ರೀಮತಿ ವೀಣಾ ಹೊಳ್ಳ, ಉಪಾಧ್ಯಕ್ಷ ವಿಕ್ಟರ್ ಕ್ರಾಸ್ತಾ ಮತ್ತು ಎಲ್ಲಾ ನಿರ್ದೆಶಕರು ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.