ಸೆ. 16: ಶ್ರೀ ಗುರುನಾರಾಯಣ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 164ನೇ ಜಯಂತಿ

ಬೆಳ್ತಂಗಡಿ : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲದ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಗುರು ಜಯಂತಿ ಸೆ.14 ರಂದು ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಬ್ರಹ್ಮಶ್ರೀ ಗೌರವ ಪುರಸ್ಕಾರ, ಸಾಧಕರಿಗೆ ಸನ್ಮಾನ ದೊಂದಿಗೆ ನಡೆಯಲಿದೆ.
ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್‌ನ ಮಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಮಾಜಿ ಶಾಸಕ ಹಾಗೂ ಸಂಘದ ಗೌರವಾಧ್ಯಕ್ಷ ಕೆ.ವಸಂತ ಬಂಗೇರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ಪರ್ಪಾಳೆ ಅಧ್ಯಕ್ಷತೆ ಮಹಿಸಲಿದ್ದಾರೆ. ಚಿಂತಕರು ಹಾಗೂ ಪತ್ರಕರ್ತ ದಿನೇಶ್ ಅಮೀನ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಕರ್ನಾಟಕದ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಘದ ಮಾಜಿ ಅಧ್ಯಕ್ಷರುಗಳು, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಾಜಶ್ರೀ ವಿ.ರಮಣ್ ಗೌರವ ಉಪಸ್ಥಿರಿದ್ದು, ಕಾರ್ಯಕ್ರಮದಲ್ಲಿ ಸಮಾಜದ ಸಚಿವರು, ಪ್ರತಿಪಕ್ಷನಾಯಕರಿಗೆ, ಶಾಸಕರುಗಳಿಗೆ, ಇನ್ನಿತರ ಸಾಧಕರನ್ನು ಸನ್ಮಾನಿಸಲಾಗುವುದು ಮತ್ತು ಹೆಮ್ಮೆಯ ಸೈನಿಕರಿಗೆ, ತಾಲೂಕಿನ ಕೃಷಿ ಸಾಧಕರೋರ್ವರನ್ನು ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಬಲೆ ತೆಲಿಪಾಲೆ ಮತ್ತು ಮಜಾಭಾರತ ಖ್ಯಾತಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ತೆಲಿಕೆದ ತೆನಾಲಿ ತಂಡ ಕಾರ್ಕಳ ಇವರಿಂದ ತೆಲಿಕೆದ ಬರ್ಸ ಮನೋರಂಜನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸೊಮನಾಥ ಬಂಗೇರ ವರ್ಪಾಳೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.