HomePage_Banner_
HomePage_Banner_
HomePage_Banner_

ಮುಗುಳಿ ಅಂಗನವಾಡಿ ಕೇಂದ್ರ ಉದ್ಘಾಟನೆ

Advt_NewsUnder_1

ಮುಗುಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಮುಗುಳಿ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಸೆ.11 ರಂದು ಜರುಗಿತು.
ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲಿಸಿ, ಉದ್ಘಾಟನೆಯನ್ನು ನೆರವೇರಿಸಿದರು. ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ, ಮಂಗಳೂರು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲ್ಬಾವಿ, ತಹಶೀಲಾರ್ ಮದನ್ ಮೋಹನ್ ಕೆ.ಎ.ಎಸ್, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್, ನ.ಪಂ. ಮುಖ್ಯಾಧಿಕಾರಿ ಎಮ್.ಹೆಚ್ ಸುಧಾಕರ್, ನ.ಪಂ ಉಪಾಧ್ಯಕ್ಷ ಜಗದೀಶ್.ಡಿ, ನ.ಪಂ ಸದಸ್ಯೆ ಶ್ರೀಮತಿ ನಳಿನಿ ವಿಶ್ವನಾಥ್, ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೆಸ್ ಉಪಸ್ಥಿತರಿದ್ದರು.
ಮುಗುಳಿ ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿ ಅಧ್ಯಕ್ಷರು, ಸರ್ವಸದಸ್ಯರು, ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.