ಅರಸಿನಮಕ್ಕಿ : ಸುರತ್ಕಲ್ನ ವಿದ್ಯಾದಾಯಿನಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯ ಚರ್ಚಾ ಸ್ಪರ್ಧೆಯಲ್ಲಿ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಧನುಷ್ ಯು. ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
‘ಕಸ ತ್ಯಾಜ್ಯವೇ ಅಥವಾ ಸಂಪನ್ಮೂಲವೇ’ ಎಂಬ ವಿಷಯದ ಕುರಿತು ಚರ್ಚಾ ಸ್ಪರ್ಧೆ ನಡೆಯಿತು. ಇವರು ಉಡ್ಯೇರೆಯ ನಾರಾಯಣ ಕುಲಾಲ್ ಮತ್ತು ಶ್ರೀಮತಿ ಜಾನಕಿ ದಂಪತಿಯ ಪುತ್ರ.