ಶ್ರೀ ಗುರುದೇವ ಕಾಲೇಜು: ಸಾಹಿತ್ಯ ಮತ್ತು ಲಲಿತ ಕಲಾ ಸಂಘದ ಉದ್ಘಾಟನೆ

Advt_NewsUnder_1
Advt_NewsUnder_1

ಬೆಳ್ತಂಗಡಿ : ವಿದ್ಯಾರ್ಥಿಗಳು ಸಾಹಿತ್ಯಿಕ ಅಭಿರುಚಿಯನ್ನು ಬೆಳೆಸಿಕೊಂಡಾಗ ಸಮಾಜವನ್ನು ಹೆಚ್ಚು ಅರ್ಥೈಸಿಕೊಳ್ಳಲು ಸಾಧ್ಯ. ವಿದ್ಯಾಸಂಸ್ಥೆಯ ಒಳಗೆ ಸಿಗುವ ಬರವಣಿಗೆಯ ಶ್ರೇಷ್ಠ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡಬೇಕು ಎಂದು ಮಾಜಿ ಶಾಸಕ, ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಕೆ. ವಸಂತ ಬಂಗೇರ ಹೇಳಿದರು. ಅವರು ಸೆ.15 ರಂದು ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ಸಾಹಿತ್ಯ ಮತ್ತು ಲಲಿತ ಕಲಾ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ಸೂಕ್ಷ್ಮವಾದ ವಿವೇಚನಾ ಮನೋಭಾವ ಬರಹಗಾರನಲ್ಲಿರಬೇಕು. ಸಮಾಜದಲ್ಲಿ ಯಾವುದು ಸರಿ ಯಾವುದು ತಪ್ಪು ಎಂಬುದು ವಿಶ್ಲೇಷಣೆ ಮಾಡಿ ಬರೆಯಬೇಕು. ಯಾರದೋ ಒತ್ತಾಯ ಮತ್ತು ಹಣದ ಪ್ರಭಾವಕ್ಕೆ ಒಳಗಾಗಿ ಬರಹಗಳು ಮೂಡಿ ಬರದೆ ಸಮಾಜಮುಖಿಯಾದ ಚಿಂತನೆಂದ ಬರಹ ಮೂಡಿಬರಬೇಕು ಎಂದರು
ಕಾಲೇಜಿನ ಜ್ಞಾನಗಂಗಾ ಭಿತ್ತಿಪತ್ರಿಕೆಯನ್ನು ಅನಾವರಣ ಮಾಡಿದ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್ ಬಳಂಜ ಮಾತನಾಡಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಇಂದು ವಿಪುಲ ಅವಕಾಶಗಳಿದ್ದು, ಸದ್ಭಳಕೆ ಮಾಡಿಕೊಂಡು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು. ಸಮಾಜದ ಎಲ್ಲಾ ವರ್ಗದ ಜನರು ಒಪ್ಪುವಂತೆ ಯಾವುದನ್ನು ಹೇಗೆ ಬರೆಯಬೇಕು ಎಂಬ ತಿಳುವಳಿಕೆಂದ ಬರೆಯುವ ವ್ಯಕ್ತಿ ಸಮಾಜದ ನಿಜವಾದ ಆಸ್ತಿಯಾಗುವುದರಲ್ಲಿ ಅನುಮಾನವಲ್ಲ ಎಂದರು.
ವೇದಿಕೆಯಲ್ಲಿದ್ದ ಕಾಲೇಜಿನ ಪ್ರಾಂಶುಪಾಲ ಎ ಕೃಷ್ಣಪ್ಪ ಪೂಜಾರಿ ಪ್ರಸ್ತಾ”ಕ ಮಾತನಾಡಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಕೊಡಗು ಮಳೆ ಹಾನಿ ಸಂತ್ರಸ್ತರಿಗಾಗಿ ವಿದ್ಯಾರ್ಥಿಗಳು ಸಂಗ್ರಹಿಸಿದ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗಾಗಿ ಕಾಲೇಜಿನ ಪ್ರಾಂಶುಪಾಲ ಎ ಕೃಷ್ಣಪ್ಪ ಪೂಜಾರಿ ಸಂಸ್ಥೆಯ ಅಧ್ಯಕ್ಷ ಕೆ ವಸಂತ ಬಂಗೇರರಿಗೆ ಹಸ್ತಾಂತರಿಸಿದರು. ಸಾಹಿತ್ಯಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸ್ಪರ್ಧಾ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.
ಗಣಿತಶಾಸ್ತ್ರ ಉಪನ್ಯಾಸಕಿ ಮಾಯಾಭಟ್ ಅತಿಥಿಗಳನ್ನು ಪರಿಚುಸಿದರು. ರಸಾಯನಶಾಸ್ತ್ರ ಉಪನ್ಯಾಸಕಿ ವಿನಯಾ ಭಿಡೆ ಬಹುಮಾನಿತರ ಪಟ್ಟಿಯನ್ನು ವಾಚಿಸಿದರು. ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಸುಮನ್ ಅನಿಸಿಕೆಯನ್ನು ವ್ಯಕ್ತ ಪಡಿಸಿದರು.
ಕಾಲೇಜಿನ ಉಪನ್ಯಾಸಕರು ಹಾಗೂ ಸಾಹಿತ್ಯ ಮತ್ತು ಲಲಿತ ಕಲಾ ಸಂಘದ ಸಂಚಾಲಕರಾದ ಹೇಮಾವತಿ ಕಾರ್ಯಕ್ರಮ ನಿರೂಪಿಸಿ, ಲತಾ ಎನ್ ಕೋಟ್ಯಾನ್ ಧನ್ಯವಾದವಿತ್ತರು.
.
.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.