ಲಾಯಿಲ: ವಿಶ್ವಕರ್ಮ ಜಯಂತಿ ಆಚರಣೆ

Advt_NewsUnder_1
Advt_NewsUnder_1

ಲಾಯಿಲ: ವಿಶ್ವಕರ್ಮ ಜಯಂತಿ ಆಚರಣೆ ಹಾಗೂ ವಿಶ್ವಕರ್ಮ ಪೂಜೆಯು ವೇಣೂರು ಪ್ರಕಾಶ ಪುರೋಹಿತ್ ಹಾಗೂ ಇತರ ಪುರೋಹಿತರ ನೇತೃತ್ವದಲ್ಲಿ ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಸೆ.17 ರಂದು ಜರುಗಿತು.
ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ನಿವೃತ್ತ ಅಧ್ಯಾಪಕ ಪಿ.ಕಮಲಾಕ್ಷ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ತಾ.ಪಂ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್, ತಾ.ಪಂ. ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್,ತಾ.ಪಂ ಸದಸ್ಯ ಗೋಪೀನಾಥ ನಾಯಕ್, ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಅಧ್ಯಕ್ಷ ಗೋಪಾಲ ಆಚಾರ್ಯ, ಎಸ್.ಡಿ.ಎಂ ಕಾಲೇಜು ಉಜಿರೆ ಪ್ರಾಚಾರ್ಯ ಡಾ| ರಾಕೇಶ್ ಟಿ.ಎಸ್ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಉಪಾಧ್ಯಕ್ಷ ಸೀತಾರಾಮ ಆಚಾರ್ಯ ವೇಣೂರು, ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ಕೈಪ್ಲೋಡಿ, ಕೋಶಾಧಿಕಾರಿ ಸದಾನಂದ ಆಚಾರ್ಯ ಉಜಿರೆ, ಸಹಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಆಚಾರ್ಯ, ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ಆಚಾರ್ಯ, ಕಾರ್ಯಕಾರಿ ಸಮಿತಿಯ ಸದಸ್ಯರು, ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ಸದಸ್ಯರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.