HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಉಜಿರೆಯ ರುಡ್‌ಸೆಟ್ ಸಂಸ್ಥೆಗೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ಭೇಟಿ

ಉಜಿರೆ: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗ್ಡೆ ರವರು ರುಡ್‌ಸೆಟ್ ಸಂಸ್ಥೆ ಉಜಿರೆಗೆ ಭೇಟಿ ನೀಡಿ ಶಿಭಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜೀವನದಲ್ಲಿ ಸ್ವ ಸಾಮರ್ಥ್ಯವನ್ನು ಅರಿತುಕೊಂಡು ಛಲದಿಂದ ಜೀವನವನ್ನು ಮುನ್ನಡಿಸಿ, ಗೆಲುವಿಗಾಗಿಯೆ ನಮ್ಮ ಹುಟ್ಟು ಎಂಬ ಕಿವಿಮಾತನ್ನು ನುಡಿದರು. ಜೊತೆಗೆ ರುಡ್‌ಸೆಟ್ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸುತ್ತಾ ಕಳೆದ 36 ವರ್ಷಗಳಿಂದ ಉದ್ಯೋಗ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳನ್ನು ಸಾಧಿಸಿದೆ. ಅದಕ್ಕಾಗಿ ಪೂಜ್ಯ ಹೆಗ್ಗಡೆಯವರನ್ನು ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ವಿನಯ್ ಕುಮಾರ್‌ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ, ಕರುಣಾಕರ್ ಜೈನ್, ರುಡ್‌ಸೆಟ್ ಸಂಸ್ಥೆ ಬ್ರಹ್ಮಾವರ ಶಾಖೆಯ ಹಿರಿಯ ಉಪನ್ಯಾಸಕರು ವಂದಿಸಿದರು ಹಾಗೂ ಹಿರಿಯ ಉಪನ್ಯಾಸಕಿ ಶ್ರೀಮತಿ ಅನಸೂಯ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.