ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ ಪ್ರಶಸ್ತಿಗೆ ಶಿಕ್ಷಕಿ ವಸಂತಿ ಟಿ ನಿಡ್ಲೆ ಆಯ್ಕೆ

ನಿಡ್ಲೆ: ಬೆಂಗಳೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಸೆ.23 ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಶಿಕ್ಷಕರ ಸಮ್ಮೇಳನ ಮತ್ತು ಶಿಕ್ಷಕರ ದಿನಾಚರಣೆ ಸಂದರ್ಭ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿಗೆ, ಕೆಮ್ಮಟೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವಸಂತಿ ಟಿ ನಿಡ್ಲೆ ಆಯ್ಕೆಯಾಗಿದ್ದು, ಇವರು ಯುವ ಸಾಧಕ ವಿಭಾಗದಲ್ಲಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ರಾಜ್ಯ ಎನ್.ಎಸ್‌ಎಸ್ ಅಧಿಕಾರಿ ಪದನಿಮಿತ್ತ ಸರಕಾರದ ಜಂಟಿ ಕಾರ್ಯದರ್ಶಿ ಡಾ| ಗಣನಾಥ ಎಕ್ಕಾರು, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ದೂರದರ್ಶನದ ಮಾಜಿ ನಿರ್ದೇಶಕ ಮಹೇಶ್ ಜೋಶಿ, ನಟ ನೆ.ಲ ನರೇಂದ್ರ ಬಾಬು, ಪರಿಷತ್‌ನ ರಾಜ್ಯಾಧ್ಯಕ್ಷ ಕೆ.ಎಸ್ ವಿಜಯಕುಮಾರ್, ವಿಧಾನ ಪರಿಷತ್ ಸದಸ್ಯ ಅ.ದೇವೆಗೌಡ ರವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಪ್ರಶಸ್ತಿಪ್ರದಾನ ಮಾಡಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.