ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು: ಸಾಹಿತ್ಯ ಲಲಿತಕಲಾ ಸಂಘದ ಉದ್ಘಾಟನೆ

ಬೆಳ್ತಂಗಡಿ : ಸಾಹಿತ್ಯ ಸ್ವಹಿತವನ್ನು ಉಂಟುಮಾಡುವಂತಹುದು. ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳವುದರಿಂದ ಜ್ಞಾನ ಸಂಪಾದನೆ ಜೊತೆಗೆ ಭಾರತೀಯ ಸಂಸ್ಕೃತಿಯನ್ನು ಹೆಚ್ಚು ಅರ್ಥೈಸಿಕೊಳ್ಳವಂತಾಗುವುದು ಎಂದು ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ|ಚೇತನ್ ಸೋಮೇಶ್ವರ ಹೇಳಿದರು.
ಅವರು ಸೆ.20ರಂದು ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾಲೇಜಿನ ಸಾಹಿತ್ಯ ಮತ್ತು ಲಲಿತ ಕಲಾ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.ಸಾಹಿತ್ಯದ ಅಭಿರುಚಿ ಉಳ್ಳ ವ್ಯಕ್ತಿ ಸಮಾಜದ ತಿಳುವಳಿಕೆಯನ್ನು ಹೊಂದಿರುತ್ತಾನೆ. ವಿದ್ಯಾರ್ಥಿಗಳು ಸೃಜನಶೀಲತೆ ಬೆಳೆಸಿಕೊಳ್ಳಲು ಕಾಲೇಜಿನ ಒಳಗೆ ಸಿಗುವ ಸಾಹಿತ್ಯ ಮತ್ತು ಲಲಿತ ಕಲೆಗಳ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಎ ಕೃಷ್ಣಪ್ಪ ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನ ಒಳಗೆ ಸಿಗುವ ಉತ್ತಮ ಅವಕಾಶಗಳನ್ನು ಉಪಯೋಗಿಸಿಕೊಂಡ ವಿದ್ಯಾರ್ಥಿ ಜೀವನ ಕ್ರಮವನ್ನು ಚೆನ್ನಾಗಿ ತಿಳಿದು ಬದುಕುತ್ತಾನೆ. ಉತ್ತಮ ಅಭಿರುಚಿಯಿಂದ ಅನುಭವ ಬೆಳೆಯುವುದು ಎಂದರು.
ಕಾಲೇಜಿನ ಇತಿಹಾಸ ಉಪನ್ಯಾಸಕ ಹಾಗೂ ಸಂಘದ ಮಾರ್ಗದರ್ಶಕ ಡಾ. ಪ್ರವೀಣ್ ಬಿ ಕುದ್ಯಾಡಿ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಮಲ್ಲಿಕಾ ಬಿ ರಾವ್ ಬಹುಮಾನಿತರ ಪಟ್ಟಿಯನ್ನು ವಾಚಿಸಿದರು.
ವಿದ್ಯಾರ್ಥಿಗಳಾದ ಅರ್ಚನಾ ಮತ್ತು ತಂಡ ಪ್ರಾರ್ಥನೆ ನೆರವೇರಿಸಿ, ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಹಾಗೂ ಸಂಘದ ಸಹಾಯಕ ಮಾರ್ಗದರ್ಶಕಿ ಬಬಿತಾ ರೈ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.