ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಗುರುವಾಯನಕೆರೆ: ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಇಂದು (ಸೆ.22)  ಸಹಕಾರಿ ಸಂಘದ ‘ಜೇಷ್ಠ, ಸಭಾಭವನದಲ್ಲಿ ಸಂಘದ ಅಧ್ಯಕ್ಷ ಭಗೀರಥ ಜಿ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಜಿತಾ ವಿ ಬಂಗೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಜ್ ಜೈನ್, ತಾ.ಪಂ. ಸದಸ್ಯ ಗೋಪೀನಾಥ ನಾಯಕ್, ಮುಗುಳಿ ನಾರಾಯ ರಾವ್, ನಿರ್ದೇಶಕರುಗಳು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.