ತಾಲೂಕು ವಕ್ಫ್ ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ

ಗುರುವಾಯನಕೆರೆ: ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮಾ ಮಸೀದಿ ಗುರುವಾಯನಕೆರೆ ಹಾಗೂ ದ.ಕ ಜಿಲ್ಲಾ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಆಶ್ರಯದಲ್ಲಿ ತಾಲೂಕು ವಕ್ಫ್ ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭವು ಇಂದು (ಸೆ.22) ಗುರವಾಯನಕೆರೆ ಜುಮಾ ಮಸೀದಿ ಸಮುದಾಯ ಭವನದಲ್ಲಿ ಜರುಗಿತು.
ಜುಮಾ ಮಸೀದಿ ಖತೀಬ ಹಾಗೂ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಬಹು| ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಅಲವಿ ದುಅ ಆಶೀರ್ವಚನ ನೀಡಿದರು. ಜುಮಾ ಮಸೀದಿ ಅಧ್ಯಕ್ಷ ಕೆ.ಎ ಉಸ್ಮಾನ್ ಬಳಂಜ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್, ಮಂಗಳೂರು ವಕ್ಫ್ ಅದಿಕಾರಿ ಹಾಜಿ ಅಬೂಬಕ್ಕರ್, ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಕೆ.ಎಂ.ಅಬ್ದುಲ್ ಕರೀಂ ಗೇರುಕಟ್ಟೆ, ಗುರುವಾಯನಕೆರೆ ದರ್ಗಾ ಶರೀಫ್ ಅಧ್ಯಕ್ಷ ಉಸ್ಮಾನ್ ಶಾಫಿ, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.