ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ.23 ರಿಂದ 30ರ ವರೆಗೆ ನಡೆಯಲಿರುವ 20ನೇ ವರ್ಷದ ಭಜನಾ ತರಬೇತಿ ಕಮ್ಮಟ ಕಾರ್ಯಕ್ರಮದ ಉದ್ಘಾಟನೆಯು ಸೆ.23 ರಂದು ಧರ್ಮಸ್ಥಳ ಶ್ರೀ ಮಹೋತ್ಸವ ಸಭಾಭವನದಲ್ಲಿ ಜರುಗಿತು.

ಧಾರವಾಡ ಮಣಕವಾಡ ಶ್ರೀ ಗುರು ಅನ್ನದಾನೀಶ್ವರರ ದೇವಮಂದಿರ ಮಠದ ಶ್ರೀ ಶ್ರೀ ಸಿದ್ಧರಾಮ ದೇವರು ಉದ್ಘಾಟನೆಯನ್ನು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಧಾಮ ಮಾಣಿಲ ಸೇವಾ ಪ್ರತಿಷ್ಠಾನದ ಸ್ವಾಮೀಜಿ ಶ್ರೀ ಮೋಹನದಾಸ ಸ್ವಾಮೀಜಿ ಗೌರವ ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಉಪಾಧ್ಯಕ್ಷರಾದ ಮಾತೃಶ್ರೀ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಕಾರ್ಯದರ್ಶಿ ಜಯರಾಮ ನೆಲ್ಲಿತ್ತಾಯ, ಭಜನಾ ಕಮ್ಮಟ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಮಮತಾ ರಾವ್  ಹಾಗೂ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.