ಕೊಯ್ಯೂರು: ಕೆ. ಅಶೋಕ್ ಕುಮಾರ್‌ಗೆ ಅಭಿನಂದನಾ ಸಮಾರಂಭ

ಕೊಯ್ಯೂರು: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 43 ವರ್ಷಗಳಿಂದ ಸುದೀರ್ಘ ವರ್ಷ ಕಾರ್ಯದರ್ಶಿಯಾಗಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಮೇ 31 ರಂದು ವಯೋನಿವೃತ್ತರಾದ ಕೆ. ಅಶೋಕ್ ಕುಮಾರ್‌ರವರಿಗೆ ಸಂಘದ ವತಿಯಿಂದ ಅಭಿನಂದನಾ ಸಮಾರಂಭವು ಇಂದು (ಅ.1 ) ಆದೂರು ಪೆರಾಲ್‌ನ ಶ್ರೀ ಪಂಚದುರ್ಗಾ ಸಹಕಾರಿ ಭವನದಲ್ಲಿ ಜರುಗಿತು.
ಸಮಾರಂಭವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಮ್.ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಶ್ರೀಕೃಷ್ಣ ಕೆ. ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಕಟೀಲಿನ ಅನುವಂಶೀಯ ಅರ್ಚಕರಾದ ವೇ ಮೂ| ಕಮಲಾದೇವಿ ಅಸ್ರರಣ್ಣರು ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಸ.ಪ.ದರ್ಜೆ ಕಾಲೇಜು ಪ್ರಾಂಶುಪಾಲ ಗಣಪತಿ ಭಟ್ ಕುಳಮರ್ವ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಯು.ವಿಜಯ ರಾಘವ ಪಡ್ವೆಟ್ನಾಯ,  ಶ್ರೀ ಕ್ಷೇತ್ರ ಧರ್ಮಸ್ಥಳ ತೋಟಗಾರಿಕಾ ವಿಭಾಗದ ಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಬಜೆ  , ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್ಯ, ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಬಿ.ನಿರಂಜನ್ ಭಾವಂತಬೆಟ್ಟು, ಸಹಕಾರಿ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಕುವೆಟ್ಟು ಕ್ಷೇತ್ರದ ಜಿ.ಪ.ಸ. ಮಮತಾ ಎಂ.ಶೆಟ್ಟಿ, ಕೊಯ್ಯೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಕಳಿಯ ಕ್ಷೇತ್ರದ ತಾ.ಪ.ಸದಸ್ಯ ಪ್ರವೀಣ್ ಕುಮಾರ್, ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಕನ್ಯಾ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.