ವೀರಕೇಸರಿ ಬೆಳ್ತಂಗಡಿ ವತಿಯಿಂದ 3 ಬಡ ಕುಟುಂಬಗಳಿಗೆ ಆರ್ಥಿಕ ನೆರವು

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಇಟ್ಟುಕೊಂಡು ಸೇವೆಗಾಗಿ ಸಂಭಾಷಣೆ ಎಂಬ ಕಲ್ಪನೆಯ ಮೂಲಕ ಕಾರ್ಯನಿರ್ವಹಿಸುತ್ತಿರುವ ವೀರ ಕೇಸರಿ ಬೆಳ್ತಂಗಡಿ ಸಂಘಟನೆ ನೊಂದ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವ ಮೂಲಕ 3ನೇ ವರ್ಷದ ಪಯಣದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ 3 ಕುಟುಂಬಗಳಿಗೆ ನೆರವಾಗುವ ಮೂಲಕ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ.
69 ನೇ ಸೇವಾಯೋಜನೆಯಾಗಿ ಮಂಜೇಶ್ವರ ತಾಲೂಕಿನ ಪೈವಳಿಕೆಯ ಅಂಬಿಕಾನ ಮನೆಯ ಶ್ರೀಮತಿ ಜಯಂತಿ ಇವರು ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ರೂ.15 ಸಾವಿರವನ್ನು ಸದಸ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.
70 ನೇ ಸೇವಾಯೋಜನೆಯಾಗಿ ಕಾರ್ಕಳ ತಾಲೂಕಿನ ಪರಪ್ಪಾಡಿ ನಿಟ್ಟೆ ಕುಮಾರು ಮನೆಯ ಲಲಿತ ಇವರ ಮಗ ಕೆ.ಎಂ.ಸಿ.ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ರೂ.10 ಸಾವಿರವನ್ನು ಸದಸ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. 71 ನೇ ಸೇವಾಯೋಜನೆಯಾಗಿ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಧರ್ಣಪ್ಪ ಪೂಜಾರಿ ಇವರ ಮಗಳು ರಕ್ತದ ಅಲರ್ಜಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ರೂ.15 ಸಾವಿರವನ್ನು ಸದಸ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಮೂರು ಸೇವಾ ಯೋಜನೆಗಳಿಗೆ ಒಟ್ಟು ರೂ.40000 ವ್ಯಯ ಮಾಡಲಾಯಿತು. ಈ ಯೋಜನೆಯ ಯಶಸ್ಸಿನೊಂದಿಗೆ 71 ನೇ ಸಹಾಯ ಯೋಜನೆಗಳನ್ನು ತಲುಪಿದ್ದು ತಂಡದ ಸದಸ್ಯರ ಸಮ್ಮುಖದಲ್ಲಿ ಚೆಕ್ ಹಸ್ತಾಂತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.