ಗುರುದೇವ ಕಾಲೇಜು: ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ: ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಮಹಾತ್ಮಾ ಗಾಂಧಿಜಿಯವರ 150ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ವಿದ್ಯಾರ್ಥಿಗಳ ಜೀವನದಲ್ಲಿ ಗಾಂಧೀಜಿಯವರ ಶಿಸ್ತು, ಸಹಕಾರ ಇತ್ಯಾದಿ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಕೇವಲ ನಾಲ್ಕು ಗೋಡೆಗಳ ಮಧ್ಯದಲ್ಲಿರುವ ಶಿಕ್ಷಣದಿಂದ ಜೀವನ ಸಾಗಿಸಲು ಸಾಧ್ಯವಿಲ್ಲ. ಬಾಳಿನುದ್ದಕ್ಕೂ ಸಾಧನೆಗಳನ್ನು ಮಾಡುತ್ತಾ, ಮಹಾತ್ಮರ ಸಾಲಲ್ಲಿ ನಮ್ಮ ಹೆಸರು ಉಳಿಸುವಂತಹ ಪ್ರಯತ್ನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಮಸೂದ ಉಪಸ್ಥಿತರಿದ್ದರು. ತೃತೀಯ ಬಿಕಾಂ ವಿದ್ಯಾರ್ಥಿನಿ ರಚಿತಾ ಗಾಂಧಿಜಿಯವರ ಸಂದೇಶವನ್ನು ನೀಡಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ಕು| ಪೂಜಾ ಬಳಗದವರು ಪ್ರಾರ್ಥಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಬಿ.ಎ ಶಮಿವುಲ್ಲಾ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಮಲ್ಲಿಕಾ ಬಿ ರಾವ್ ನಿರೂಪಿಸಿ, ಸಾಂಸ್ಕೃತಿಕ ವಿಭಾಗದ ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ ಟಿ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.