ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ

ಬೆಳಾಲು: ಇಲ್ಲಿಯ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಅ.17 ರಂದು ಶ್ರೀ ಚಾಮುಂಡೇಶ್ವರಿ ದೇವಿಗೆ ಮಹಾಪೂಜೆ, ನವರಾತ್ರಿ ಪೂಜೆ, ಶ್ರೀ ನಾಗದೇವರಿಗೆ ತಂಬಿಲ ಸೇವೆ ಹಾಗೂ ವಾಹನ ಪೂಜೆ ನಡೆಯಲಿದೆ ಎಂದು ಕ್ಷೇತ್ರದ ಡೊಂಬಯ್ಯ ಗೌಡ ಮತ್ತು ವ್ಯವಸ್ಥಾಪಕ ಹರೀಶ್ ಆರಿಕೋಡಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ, ಮಹಿಳೆಯರಿಗೆ ರವಿಕೆ ಕಣ ಮತ್ತು ಬಳೆ ವಿತರಣೆ ನಡೆಯಲಿದ್ದು, ಮಂಗಳೂರಿನ ಲಲಿತಾ ಕಲಾಸಂಗಮ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.