ಆಳ್ವಾಸ್ ವಿದ್ಯಾರ್ಥಿ ಸಿರಿ ಕವಿಗೋಷ್ಠಿ ಅಧ್ಯಕ್ಷರಾಗಿ ಉಜಿರೆಯ ಭಾರ್ಗವಿ ಶಬರಾಯ

Advt_NewsUnder_1
Advt_NewsUnder_1

ಉಜಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋ ಜಿಸಿರುವ ಆಳ್ವಾಸ್ ವಿದ್ಯಾರ್ಥಿಸಿರಿ-2018 ವಿದ್ಯಾರ್ಥಿ ಕವಿಗೋಷ್ಠಿಯ ಆಧ್ಯಕ್ಷರಾಗಿ ಉಜಿರೆ ಎಸ್‌ಡಿಎಂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭಾರ್ಗವಿ ಶಬರಾಯ ಆಯ್ಕೆಯಾಗಿದ್ದಾರೆ.
ಸಂವಾದ ಗೋಷ್ಠಿ ಅಧ್ಯಕ್ಷತೆಗೆ ಉಜಿರೆ ಎಸ್‌ಡಿಎಂ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಾಮ್ ಪ್ರಸಾದ್, ವಿಶೇಷ ಉಪನ್ಯಾಸ ನೀಡಲು ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಜ್ಞಾ ಪ್ರಭು, ಆಯ್ಕೆಯಾಗಿದ್ದಾರೆ.
ಸಂವಾದ ಗೋಷ್ಠಿಗೆ ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ಕವಿಗೋಷ್ಠಿ ಅಧ್ಯಕ್ಷರ ಪರಿಚಯ : ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರ್ಗವಿ ಉಜಿರೆ ಓಡಲದ ಪದ್ಮನಾಭ ಶಬರಾಯ ಭಾನುಮತಿ ಶಬರಾಯರ ಸುಪುತ್ರಿ. ಎಳವೆಯಿಂದಲೇ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಇವರು 2015 ರಲ್ಲಿ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಆಶು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಹಾಗೂ 2016 ರಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಆಶುಭಾಷಣದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಯುವ ಸಂಸತ್ತಿನಲ್ಲಿ ಪ್ರಪ್ರಥಮ ಮಹಿಳಾ ಮುಖ್ಯಮಂತ್ರಿಯಾಗಿ ಭಾಗವಹಿಸಿ ದ್ವ್ವಿತೀಯ ಸ್ಥಾನ ಪಡೆದಿದ್ದಾರೆ.
2017 ರಲ್ಲಿ ಹಾಸನದಲ್ಲಿ ನಡೆದ ಅಖಿಲ ಕರ್ನಾಟಕ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು. 2013 ರಲ್ಲಿ ಕಟೀಲಿನಲ್ಲಿ ನಡೆದ ಮಕ್ಕಳ ಧ್ವನಿ ಕಾರ್ಯಕ್ರಮದಲ್ಲಿ ಕವಿಗೋಷ್ಠಿ ಹಾಗೂ 2014 ರಲ್ಲಿ ಕಾಸರಗೋಡುವಿನಲ್ಲಿ ನಡೆದ ಮಕ್ಕಳ ಧ್ವನಿಯಲ್ಲಿ ಕಥಾಗೋಷ್ಠಿಯಲ್ಲಿ ಭಾಗವಹಿಸಿದ್ದರು. 2018 ರಲ್ಲಿ ಮಂಗಳೂರಿನಲ್ಲಿ ನಡೆದ ಯುವ ಉದಯೋನ್ಮುಖ ಕವಿ-ಕಾವ್ಯ ಒಂದನೇ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.