HomePage_Banner_
HomePage_Banner_
HomePage_Banner_

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಪ್ರಕರಣ ದಾಖಲು

Advt_NewsUnder_1

ಗುರುವಾಯನಕೆರೆ: ಗುರುವಾಯನಕೆರೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನೋರ್ವನನ್ನು ತಡೆದು ನಿಲ್ಲಿಸಿದ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಅ.12 ರಂದು ನಡೆದಿದೆ.
ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರೋಹಿನಾಥ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆರೋಪಿ ಸವಾರ ಸಮದ್ ಎಂಬಾತನು ಹೆಲ್ಮೆಟ್ ಧರಿಸದೆ ಬೈಕ್‌ನಲ್ಲಿ ಮೂವರನ್ನು ಕೂರಿಸಿಕೊಂಡು ವಾಹನ ಚಲಾಯಿಸುತ್ತಿದ್ದ ಸಂದರ್ಭದಲ್ಲಿ, ಆತನನ್ನು ತಡೆದು ನಿಲ್ಲಿಸಿ, ಪ್ರಕರಣ ದಾಖಲಿಸಿ ರಶೀದಿ ನೀಡುತ್ತಿದ್ದ ಸಂದರ್ಭ, ಸವಾರ ಸಮದ್ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಕೈಯನ್ನು ದೂಡಿ, ಜೀವ ಬೆದರಿಕೆ ಒಡ್ಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ರೋಹಿನಾಥ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.