HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ವಿಶ್ವ ಜನಸಂಖ್ಯಾ ದಿನಾಚರಣೆ

ಬೆಳ್ತಂಗಡಿ: ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಧು ಕೆ. ಶೆಟ್ಟಿ ನೇತೃತ್ವದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯು ನಡೆಯಿತು.
ಈ ಸಂದರ್ಭದಲ್ಲಿ ಸರ್ಕಾರಿ ಕಾಲೇಜು ಮಕ್ಕಳಿಗೆ ಭಾಷಣ ಸ್ಪರ್ಧೆ ಹಾಗೂ ಕಳೆದ ವರ್ಷದ ಸಾಲಿನಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಅಧಿಕ ಪ್ರಗತಿ ಸಾಧಿಸಿದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ ಮತ್ತು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ ಗೌರವಿಸಲಾಯಿತು.
ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಸುಜಾತ, ನೆರಿಯ-ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮರಿಯಮ್ಮ, ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ಜಯಂತಿ, ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ಮೋನಕ್ಕ, ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಿಯ, ಬೇಷ್ ಕುಮಾರಿ ಬೆಳ್ತಂಗಡಿ, ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ದೇವಕಿ ಹಾಗೂ ಆಶಾ ಕಾರ್ಯಕರ್ತೆಯರಾದ ಲೀಲಾ ವೇಣೂರು, ರತ್ನಾವತಿ ಕಣಿಯೂರು ಮತ್ತು ಶಾರದಾ ಶೆಟ್ಟಿ ಅಳದಂಗಡಿ ಹಾಗೂ ಭಾಷಣ ಸ್ಪರ್ಧೆಯಲ್ಲಿ ಕುತ್ಯಾರು ಪ್ರಥಮ ಪದವಿ ಪೂರ್ವ ಕಾಲೇಜಿನ ಪವನ್ ಕುಮಾರ್, ಅರಸಿನಮಕ್ಕಿ ದ್ವಿತೀಯ ಪ.ಪೂ.ಕಾಲೇಜು ನಿತೇಶ್ ಯಂ, ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜಿನ ವರುಣ್ ಟಿ.ಆರ್, ಇವರುಗಳನ್ನು ಗೌರವಿಸಲಾಯಿತು.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಇ.ಎನ್.ಟಿ ತಜ್ಞೆ ಡಾ| ತಾರಕೇಶ್ವರಿ ವಿ.ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಡಾ| ದೀಪಿಕಾ, ಡಾ| ಯೋಗೀಶ್, ಮೇಲಂತಬೆಟ್ಟು ಪದವಿ ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್, ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮಲೇರಿಯ ಪರಿವೀಕ್ಷಕ ಜಯರಾಮ ಪೂಜಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ, ಆಶಾ ಮೆಂಟರ್ ಹರಿಣಿ ಉಪಸ್ಥಿತರಿದ್ದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್ ಸ್ವಾಗತಿಸಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಜೆಯ್ ನಿರೂಪಿಸಿ, ವೇಣೂರು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಾ ಧನ್ಯವಾದವಿತ್ತರು. ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಆಶಾ ಕಾರ್ಯಕರ್ತೆಯರು, ಇಲಾಖಾ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.