ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನ: ನವರಾತ್ರಿ ಉತ್ಸವದ ಪ್ರಯುಕ್ತ ಧಾರ್ಮಿಕ ಸಭೆ

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನ ಮಿತ್ತಬಾಗಿಲು ಇಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಅ.17 ರಂದು ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿತು.
ಉಜಿರೆ ಶ್ರೀರಾಮ ಭಜನಾ ಮಂದಿರದ ಗೌರವಾಧ್ಯಕ್ಷ, ಉದ್ಯಮಿ ಕೆ.ಸುಬ್ರಾಯ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಾವೂರು ಆರೋಗ್ಯ ಕ್ಲಿನಿಕ್ ನ ಡಾ| ಪ್ರದೀಪ್ ಧಾರ್ಮಿಕ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಕೊಲ್ಲಿ ದೇವಸ್ಥಾನದ ಮಾಜಿ ಅಧ್ಯಕ್ಷ ಹೆಚ್.ಜಯಂತ ಹೆಗ್ಡೆ, ಕುಕ್ಕಾವು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಜಲಜಾಕ್ಷಿ ದಾಮೋದರ ಗೌಡ ಅಗರಿಮಾರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಂಜುನಾಥ ಕಾಮತ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹಾಗೂ ನಿವೃತ್ತ ಸೈನಿಕ ಪೂವಪ್ಪ ಗೌಡ ಹೊಸವಕ್ಲು ಇವರುಗಳಿಗೆ ಸನ್ಮಾನ ನೆರವೇರಿತು.
ದೇವಸ್ಥಾನದ ಜೋರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ದಾಸಪ್ಪ ಗೌಡ, ಹಾಗೂ ಸಮಿತಿಯ ಸರ್ವಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ನಂತರ ಕು| ಕೃತಿಕಾ ಮತ್ತು ಬಳಗ ಮಂಗಳೂರು ಹಾಗೂ ಊರ ಪರವೂರ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮಗಳು ಜರುಗಿತು. ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.